ಬಂಟ್ವಾಳ : ಅಕ್ಷರ ದಾಸೋಹ ನೌಕರರಿಗೆ ರಾಜ್ಯ ಸರ್ಕಾರವು ವಿಧಾನಸಭಾ ಚುನಾವಣೆಯಲ್ಲಿ ಘೋಷಣೆ ಮಾಡಿದಂತೆ 6000 ವೇತನ ಹೆಚ್ಚಳ ಮಾಡಬೇಕೆಂದು ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಗತಿಪರ ಅಕ್ಷರ ದಾಸೋಹ ನೌಕರರ ಸಂಘ ( ಎ.ಐ.ಸಿ.ಸಿ.ಟಿ.ಯು ) ವತಿಯಿಂದ ಬಿ.ಸಿ.ರೋಡು ಮಿನಿವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸಿ ತಹಶಿಲ್ದಾರರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಎ.ಐ.ಸಿ.ಸಿ.ಟಿ.ಯು ದ.ಕ ಜಿಲ್ಲಾ ಅದ್ಯಕ್ಷರಾದ ಕಾಮ್ರೇಡ್ ರಾಮಣ್ಣ ವಿಟ್ಲ ಮಾತನಾಡಿ ನಮ್ಮ ದೇಶದ ಅಭಿವೃದ್ಧಿಗೆ ಶಿಕ್ಷಣ ಆರೋಗ್ಯ, ಉದ್ಯೋಗ ಹಾಗೂ ಆಹಾರ ಪೂರೈಸಲು ಬೇಕಾದ ಸಂಪನ್ಮೂಲವನ್ನು ಕೇಂದ್ರ ಸರ್ಕಾರವು ಸಂಪೂರ್ಣವಾಗಿ ಕಡೆಗಣಿಸಿದ್ದು . ದೇಶದ ದುಡಿಯುವ ಜನ ವಿಭಾಗದ ಬಿಸಿಯೂಟ ಯೋಜನೆಯನ್ನು ಕೇಂದ್ರ ಸರ್ಕಾರವು 2010 ರಿಂದ ಕಡೆಗಣಿಸುತ್ತಲೇ ಬಂದಿದೆ ರಾಜ್ಯದಲ್ಲಿ ಕೆಲಸದ ಒತ್ತಡ ಹೆಚ್ಚಳವಾಗಿದೆ.ಆದರೆ ಕೆಲಸಕ್ಕೆ ತಕ್ಕ ವೇತನ ಮಾತ್ರ ಸಿಗದೇ ನೌಕರರು ಸಂಕಷ್ಟದ ಪರಿಸ್ಥಿತಿಯಲ್ಲಿ ನರಳುವಂತೆ ಮಾಡಿದೆ. ಬಿಸಿಯೂಟ ನೌಕರರಿಗೆ ರಾಜ್ಯ ಸರ್ಕಾರವು ವಿಧಾನಸಭಾ ಚುನಾವಣೆಯಲ್ಲಿ ಘೋಷಣೆ ಮಾಡಿದಂತೆ 6000 ವೇತನ ಹೆಚ್ಚಳ ಮಾಡಬೇಕೆಂದು ಒತ್ತಾಯಿಸಿದರು.
ಎ.ಐ.ಸಿ.ಸಿ.ಟಿ.ಯು ರಾಜ್ಯ ಸಮಿತಿ ಗೌರವಾದ್ಯಕ್ಷರಾದ ಕಾಮ್ರೇಡ್ ಮೋಹನ್ .ಕೆ.ಇ , ಎ.ಐ.ಸಿ.ಸಿ.ಟಿ.ಯು ತಾಲೂಕು ಮುಖಂಡರಾದ ಕಾಮ್ರೇಡ್ ರಾಜಾ ಚೆಂಡ್ತಿಮಾರ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ಎ.ಐ.ಸಿ.ಸಿ.ಟಿ.ಯು ಮುಖಂಡರಾದ ಕಾಮ್ರೇಡ್ ಸಜೇಶ್ ವಿಟ್ಲ, ಕಾಮ್ರೇಡ್ ಸುಲೈಮಾನ್ ಕೆಳಿಂಜ,
ಅಕ್ಷರ ದಾಸೋಹ ಸಂಘಟನೆಯ ತಾಲೂಕು ಅದ್ಯಕ್ಷರಾದ ಜಯಶ್ರೀ ಆರ್.ಕೆ,ಕಾರ್ಯದರ್ಶಿ ವಾಣಿಶ್ರೀ ಕನ್ಯಾನ, ಉಪಾದ್ಯಕ್ಷರುಗಳಾದ ವಿನಯ ನಡುಮೊಗರು, ಸೇವಂತಿ ಮುಂತಾದವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.