ಕೊಲ್ಲೂರು : ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ವಿಜಯದಶಮಿಯಂದು ಮಕ್ಕಳ ಅಕ್ಷರಾಭ್ಯಾಸ (ವಿದ್ಯಾರಂಭಂ) ಅತ್ಯಂತ ಸಂಭ್ರಮದಿಂದ ನಡೆಯಿತು.
ವಾಗ್ದೇವತೆಯ ಸ್ವರೂಪಿಯಾದ ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಅಕ್ಷರಾಭ್ಯಾಸ ಮಾಡಿಸಿದರೆ ಮಕ್ಕಳು ವಿದ್ಯಾಕ್ಷೇತ್ರದಲ್ಲಿ ಉತ್ತಮ ಪ್ರಗತಿ ಕಾಣುತ್ತಾರೆ ಎಂಬ ಬಲವಾದ ನಂಬಿಕೆ ಇರುವುದರಿಂದ, ಕೇವಲ ಕರ್ನಾಟಕ ಮಾತ್ರವಲ್ಲದೆ ನೆರೆಯ ಕೇರಳ ಮತ್ತು ತಮಿಳುನಾಡಿನಿಂದಲೂ ಸಾವಿರಾರು ಪೋಷಕರು ತಮ್ಮ ಮಕ್ಕಳೊಂದಿಗೆ ಇಲ್ಲಿಗೆ ಆಗಮಿಸಿ ಅಕ್ಷರ ಅಭ್ಯಾಸ ನಡೆಸುತ್ತಾರೆ ಎಂದು ತಿಳಿದುಬಂದಿದೆ.

