ಬೆಳ್ತಂಗಡಿ : ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ಆಶ್ರಯದಲ್ಲಿ ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರೋತ್ಸಾಹ ಹಾಗೂ ಆರೋಗ್ಯ ಜಾಗೃತಿ ಉದ್ದೇಶದಿಂದ ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಸನ್ಮಾನ, ಕಂಪ್ಯೂಟರ್ ವಿತರಣೆ ಮತ್ತು ಆರೋಗ್ಯ ತಪಾಸಣೆ ಶಿಬಿರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮವು ಜೂನ್ 14, 2026ರಂದು ಬೆಳಿಗ್ಗೆ 10.30 ಗಂಟೆಗೆ ಅಳದಂಗಡಿಯ ಶ್ರೀ ಸೋಮನಾಥೇಶ್ವರಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು ವಿತರಿಸಲಾಗುವುದು. ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು. ಇದೇ ವೇಳೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ವಿತರಣೆಯ ಜೊತೆಗೆ ಸಾರ್ವಜನಿಕರಿಗಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರವೂ ನಡೆಯಲಿದೆ.
ಆಯೋಜಕರು ಗ್ರಾಮಸ್ಥರು, ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಕೋರಲಾಗಿದೆ.

