ಅಲೆವೂರು: ಕರ್ವಾಲು ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಬೆಂಕಿ ಅವಘಡ

0
56

ಉಡುಪಿ: ಅಲೆವೂರು ಗ್ರಾಮದ ಕರ್ವಾಲು ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಶನಿವಾರ ಮುಂಜಾನೆ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.

ಆಕಸ್ಮಿಕವಾಗಿ ಕಟ್ಟಡಕ್ಕೆ ಬೆಂಕಿ ತಗುಲಿದ್ದು, ನೋಡು ನೋಡುತ್ತಿದ್ದಂತೆ ಇಡೀ ಕಟ್ಟಡವನ್ನು ಅಗ್ನಿಯ ಕೆನ್ನಾಲಿಗೆ ಆವರಿಸಿಕೊಂಡಿದೆ. ಘಟಕದೊಳಗಿದ್ದ ಅಪಾರ ಪ್ರಮಾಣದ ಸೊತ್ತುಗಳು ಬೆಂಕಿಗಾಹುತಿಯಾಗಿದೆ.

ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದ್ದು, ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಇಲಾಖೆಗೆ ಸಿಬ್ಬಂದಿ ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿ ನಂದಿಸಿದರು. ಇದು ಉಡುಪಿ ನಗರಸಭೆಗೆ ಸೇರಿದ ತ್ಯಾಜ್ಯ ವಿಲೇವಾರಿ ಘಟಕವಾಗಿದ್ದು, ಕಸ ಸಂಗ್ರಹಿಸಿ ಸಂಸ್ಕರಿಸುವ ಕಾರ್ಯ ನಡೆಯುತ್ತದೆ.

LEAVE A REPLY

Please enter your comment!
Please enter your name here