ಉಡುಪಿ: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉಡುಪಿಗೆ ಆಗಮಿಸುತ್ತಿದ್ದು, ಜಿಲ್ಲಾಡಳಿತ ಹಾಗೂ ಪರ್ಯಾಯ ಪುತ್ತಿಗೆ ಮಠದಿಂದ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಆದಿಉಡುಪಿ ಹೆಲಿಪ್ಯಾಡ್ನಿಂದ ಗುರುವಾರ ಬೆಳಗ್ಗೆ ಪ್ರಧಾನಿ ಸಾಗುವ ದಾರಿಯಲ್ಲಿ ಪೊಲೀಸರು ಮಾಕ್ ಡ್ರಿಲ್ ನಡೆಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಸಹಿತ ಹಿರಿಯ ಅಧಿಕಾರಿಗಳು ಮಾಕ್ಡ್ರಿಲ್ ವೀಕ್ಷಣೆ ಮಾಡಿದರು.
ಅಂಗಡಿ ಮುಂಗಟ್ಟುಗಳನ್ನ ಮುಚ್ಚಲು ಆದೇಶ
ಪ್ರಧಾನಿ ನರೇಂದ್ರ ಮೋದಿ ಹಿನ್ನೆಲೆಯಲ್ಲಿ 28ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಹೆಲಿಪ್ಯಾಡ್ ವಠಾರ, ಕೃಷ್ಣಮಠ ವಠಾರ, ಪ್ರವಾಸಿ ಮಂದಿರದ ಸುತ್ತಮುತ್ತ ಹಾಗೂ ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಅಂಗಡಿ ಮುಂಗಟ್ಟುಗಳನ್ನ ಮುಚ್ಚಲು ಜಿಲ್ಲಾಧಿಕಾರಿ ಟಿ.ಕೆ ಸ್ವರೂಪ್ ಆದೇಶಿಸಿದ್ದಾರೆ. ಸಾಯಂಕಾಲ 6 ಗಂಟೆಯವರೆಗೆ ನಗರದ 5 ಕಿ.ಮೀ ವ್ಯಾಪ್ತಿಯಲ್ಲಿ ಡ್ರೋನ್ ಹಾರಾಟ ನಿಷೇಧಿಸಿದ್ದು, ಉಡುಪಿ ನೋ ಫ್ಲೈ ಝೊನ್ ಎಂದು ಘೋಷಿಸಲಾಗಿದೆ.
ರೋಡ್ ಶೋ ವೀಕ್ಷಣೆಗೆ ಬರುವವರಿಗೆ ಬ್ಯಾಗ್, ನೀರಿನ ಬಾಟಲ್, ಧ್ವಜ ತರುವಂತಿಲ್ಲ. ಫೋಟೋ, ಸ್ಟಿಕರ್ಸ್, ಬಲೂನ್ಸ್, ಪಟಾಕಿ, ಲೂಸ್ ಪಾಲಿಥಿನ್ ತರುವುದನ್ನ ನಿಷೆೇಧಿಸಲಾಗಿದೆ. ಆದೇಶ ಉಲ್ಲಂಘಿಸುವವರ ವಿರುದದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿಗಳು ಆದೇಶದಲ್ಲಿ ಎಚ್ಚರಿಕೆ ನೀಡಿದ್ದಾರೆ.

