Tuesday, January 14, 2025
Homeರಾಜ್ಯಅನೈತಿಕ ಸಂಬಂಧ ಆರೋಪ: ವಿದ್ಯುತ್​ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ; ವ್ಯಕ್ತಿ ಸಾವು

ಅನೈತಿಕ ಸಂಬಂಧ ಆರೋಪ: ವಿದ್ಯುತ್​ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ; ವ್ಯಕ್ತಿ ಸಾವು

ಹಾವೇರಿ: ಅನೈತಿಕ ಸಂಬಂಧ ಆರೋಪದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನಿಗೆ ಕೆಲವರು ವಿದ್ಯುತ್‌ ಕಂಬಕ್ಕೆ ಕಟ್ಟಿಹಾಕಿ ಮನಬಂದಂತೆ ಥಳಿಸಿದ ಪರಿಣಾಮ, ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪ ಗ್ರಾಮದಲ್ಲಿ ಗುರುವಾರ ನಡೆದಿದೆ.
ಪ್ರಕಾಶ್ ಓಲೇಕಾರ ಮೃತ ವ್ಯಕ್ತಿಯಾಗಿದ್ದಾನೆ. ಆರೋಪಿಗಳು ಪ್ರಕಾಶನನ್ನು ವಿದ್ಯುತ್​ ಕಂಬಕ್ಕೆ ಕಟ್ಟಿ ಮನಬಂದಂತೆ ಥಳಿಸಿ, ಕೊರಳಿಗೆ ಚಪ್ಪಲಿ ಹಾರ ಹಾಕಿ, ಕಾಲಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ ಎಂದು ಆರೋಪಿಸಲಾಗಿದೆ.
ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಬಂದ ಆರೋಪಿಗಳು ತಮ್ಮ ಮನೆಯ ಹೆಣ್ಣು ಮಕ್ಕಳೊಂದಿಗೆ ಅಕ್ರಮ ಸಂಬಂಧ ಹೊಂದಿರುವುದಾಗಿ ಅವಾಚ್ಯವಾಗಿ ಶಬ್ದಗಳಿಂದ ನಿಂದಿಸಿದ್ದಾರೆ. ಆಗ ನನ್ನ ಸಹೋದರ ಪ್ರಕಾಶ್​, ಈ ರೀತಿ ಆರೋಪ ಮಾಡುವುದು ಸರಿಯಲ್ಲ, ನನಗೆ ಅವಳೊಂದಿಗೆ ಅನೈತಿಕ ಸಂಬಂಧ ಇಲ್ಲ ಎಂದಿದ್ದಾನೆ. ಆದರೆ ಕೋಪಗೊಂಡ ಆರೋಪಿಗಳು ಆತನ ಮೇಲೆ ಹಲ್ಲೆ ಮಾಡಿ, ವಿದ್ಯುತ್​ ಕಂಬಕ್ಕೆ ಕಟ್ಟಿ ಮಾರಣಾಂತಿಕವಾಗಿ ಥಳಿಸಿದ್ದಾರೆ. ಇದರಿಂದ ಗಾಯಗೊಂಡ ಪ್ರಕಾಶನನ್ನು ಹಾನಗಲ್ ಆಸ್ಪತ್ರೆಗೆ ದಾಖಲು ಮಾಡಿದರೂ ಕೂಡ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ಮೃತನ ಸಹೋದರ ಫಕ್ಕೀರೇಶ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಅಲ್ಲದೆ, ಆರೋಪಿಗಳು ಫಕ್ಕೀರೇಶ ಮತ್ತು ಮಹಿಳೆಗೂ ಕೂಡ ಹಲ್ಲೆ ಮಾಡಿದ್ದಾರೆ ಎಂದು ದೂರಲಾಗಿದೆ. ಈ ಘಟನೆ ಸಂಬಂಧ ಹಾನಗಲ್ ಪೊಲೀಸ್​ ಠಾಣೆಯಲ್ಲಿ ಕಲಂ: 103(1),74,189(2), 191(2),191(3), 115(2), 118(1)352, 351(2)(3), 126(2), 133, 190 ಬಿಎನ್‍ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, 7 ಮಂದಿ ಆರೊಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular