ಮಾದಕ ವಸ್ತು ಸೇವನೆ ಆರೋಪ : ಮಂಗಳೂರು, ವೇಣೂರು ವ್ಯಾಪ್ತಿಯಲ್ಲಿ ನಾಲ್ವರ ವಿರುದ್ಧ ಕೇಸ್

0
47

ಮಂಗಳೂರು : ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದಡಿ ನಾಲ್ವರ ವಿರುದ್ಧ ಪೊಲೀಸರು ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಪಡೀಲ್ ರೈಲ್ವೇ ಸೇತುವೆ ಬಳಿಯ ವೀರನಗರಕ್ಕೆ ತೆರಳುವ ಸಾರ್ವಜನಿಕ ರಸ್ತೆಯಲ್ಲಿ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಬಂಟ್ವಾಳ ತಾಲೂಕಿನ ಮಾಣಿ ನಿವಾಸಿ ಚೇತನ್ ಶೆಟ್ಟಿ (35) ಎಂಬಾತನನ್ನು ಕಂಕನಾಡಿ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪಾಂಡೇಶ್ವರದ ಬಳಿ ಮಾದಕ ವಸ್ತು ಸೇವನೆ ಮಾಡುತ್ತಿದ್ದ ಆರೋಪದಡಿ ಪಾಂಡೇಶ್ವರ ನಿವಾಸಿ ಅಕೀಫ್ (23)ನನ್ನು ಪಾಂಡೇಶ್ವರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದೇ ವೇಳೆ ಪಚ್ಚನಾಡಿ ಡಂಪಿಂಗ್ ಯಾರ್ಡ್ ಬಳಿ ಮಾದಕ ವಸ್ತು ಸೇವನೆ ಮಾಡುತ್ತಿದ್ದ ಆರೋಪದಡಿ ಪಚ್ಚನಾಡಿ ದೇವಿನಗರ ಆಶ್ರಯ ಕಾಲನಿ ನಿವಾಸಿ ಫ್ರಾನ್ಸಿಸ್ ಡಿ’ಸೋಜಾ (24)ನನ್ನು ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವೇಣೂರು ಮೇಲಿನ ಪೇಟೆಯ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡುತ್ತಿದ್ದ ಆರೋಪದಡಿ ಕುಕ್ಕೇಡಿ ನಿವಾಸಿ ಮಹಮ್ಮದ್ ಆಸೀಫ್‌ನನ್ನು ವೇಣೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಾಲ್ವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ ಬಳಿಕ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.