ಸಹಕಾರ ತತ್ವದಡಿ ಸೇವೆಯ ಜೊತೆ ಜೊತೆಗೆ ಪರಿಸರ ಸಂರಕ್ಷಣೆಯ ಕಾರ್ಯ ಶ್ಲಾಘನೀಯ : ಯಶ್ ಪಾಲ್ ಸುವರ್ಣ

0
53

ಮಲ್ಪೆ : ಮಲ್ಪೆ ಮೀನುಗಾರ ಮಹಿಳೆಯರ ಸಹಕಾರಿ ಸಂಘ ನಿ. ಮಲ್ಪೆ ಇದರ ವತಿಯಿಂದ ಶ್ರೀಜ್ಞಾನ ಜ್ಯೋತಿ ಭಜನಾ ಮಂದಿರ ಮಲ್ಪೆ ಇದರ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಸಹಕಾರ ವರ್ಷದ ಅಂಗವಾಗಿ ಹಸಿರು ಪರಿಸರ ನಿರ್ಮಿಸುವ ಕಾಯಕಲ್ಪದ ಆಶಯದೊಂದಿಗೆ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮವನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ, ಮಲ್ಪೆ ಮೀನುಗಾರ ಮಹಿಳೆಯರ ಸಹಕಾರಿ ಸಂಘ ಸಹಕಾರಿ ತತ್ವದಡಿ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬುವ ಜೊತೆ ಜೊತೆಗೆ ವನ ಮಹೋತ್ಸವದಂತಹ ಪರಿಸರ ಸಂರಕ್ಷಣೆಯ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ಅತ್ಯಂತ ಶ್ಲಾಘನೀಯವಾಗಿದ್ದು, ಜ್ಞಾನ ಜ್ಯೋತಿ ಭಜನಾ ಮಂದಿರ ಸುವರ್ಣ ಮಹೋತ್ಸವ ಆಚರಣೆಯನ್ನು ಸಹಕಾರಿ ಸಂಘಗಳ ಸಹಭಾಗಿತ್ವದಲ್ಲಿ ಗಿಡ ನೆಡುವ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತಿದೆ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಗೀತಾ ಕರ್ಕೇರ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ದಯಾನಂದ ಸುವರ್ಣ, ಜ್ಞಾನ ಜ್ಯೋತಿ ಭಜನಾ ಮಂದಿರದ ಶ್ರೀ ಪಾಂಡುರಂಗ ಮಲ್ಪೆ, ಸಂಘದ ಉಪಾಧ್ಯಕ್ಷರಾದ ರಾಧಾ ಸುವರ್ಣ, ನಿರ್ದೇಶಕರಾದ ಪೂರ್ಣಿಮ ಪುತ್ರನ್, ಯೋಗಿತಾ ಸುವರ್ಣ, ಕಾರ್ಯದರ್ಶಿ ಮಂಗಳ ತಿಲಕ್ ಹಾಗೂ ಮಹಿಳಾ ಸಂಘದ ಸದಸ್ಯರು  ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here