ಭಾವಿ ಪರ್ಯಾಯ ಮಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ಮುಂಬರುವ ಪರ್ಯಾಯದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ತಿಳಿಸಿ ಆಶೀರ್ವಚನ ನೀಡಿದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ವತಿಯಿಂದ ಪೂರ್ಣಕುಂಭ ಸಹಿತ ಭಕ್ತಿಪೂರ್ವಕವಾಗಿ ಸ್ವಾಗತ ಕೋರಲಾಯಿತು. ಈ ಸಂದರ್ಭದಲ್ಲಿ ನಾಡೋಜ ಡಾ. ಜಿ. ಶಂಕರ್, ದ. ಕ. ಮೊಗವೀರ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಕ್ಷೇತ್ರದ ಪ್ರಧಾನ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯ, ಗಿರಿಧರ್ ಸುವರ್ಣ,ಪ್ರಮುಖರಾದ ಗುಂಡು ಬಿ. ಅಮೀನ್, ಸುಧಾಕರ್ ಕುಂದರ್, ದಿನೇಶ್ ಎರ್ಮಾಳ್, ಮನೋಜ್ ಕಾಂಚನ್, ಶೈಲಜ ಪುತ್ರನ್, ಕಾಪು ಮಹಿಳಾ ಒಕ್ಕೂಟದ ಸದಸ್ಯೆಯರು ಉಪಸ್ಥಿತರಿದ್ದರು.