ಉಡುಪಿ : ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ ಹಾಗೂ ಉಡುಪಿಯ ಪೂರ್ಣಪ್ರಜ್ಞ ಸ್ವಾಯತ್ತ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಅಂತರ ಕಾಲೇಜು ಮಹಿಳಾ ಕಬಡ್ಡಿ ಪಂದ್ಯಾವಳಿಯ ಸಮಾರೋಪ ಹಾಗೂ ಬಹುಮಾನ ವಿತರಣಾ ಸಮಾರಂಭವು ಶುಕ್ರವಾರ ಕಾಲೇಜಿನ ಕ್ರೀಡಾಂಗಣದಲ್ಲಿ ನೆರವೇರಿತು.
ಕ್ರೀಡಾಕೂಟದಲ್ಲಿ ಆಳ್ವಾಸ್ ಕಾಲೇಜು ಮೂಡುಬಿದಿರೆ ಪ್ರಥಮ ಸ್ಥಾನ ಎಸ್.ಡಿ.ಎಮ್. ಕಾಲೇಜು ಉಜಿರೆ ದ್ವಿತೀಯ, ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಪುತ್ತೂರು ತೃತೀಯ ಸ್ಥಾನ ಪಡೆಯಿತು.
ಕ್ರೀಡಾಕೂಟದ ಅಂತಿಮ ಹಂತದ ಬೆಸ್ಟ್ ರೈಡರ್ ಆಗಿ ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಸುಶ್ಮಿತ, ಬೆಸ್ಟ್ ಆಲ್ರೌಂಡರ್ ಆಗಿ ಉಜಿರೆಯ ಎಸ್.ಡಿ.ಎಮ್ ಕಾಲೇಜಿನ ಅನನ್ಯ ಆಚಾರ್ಯ ಹಾಗೂ ಬೆಸ್ಟ್ ಡಿಫೆಂಡರ್ ಆಗಿ ಮೂಡುಬಿದಿರೆ ಆಳ್ವಾಸ್ ಕಾಲೇಜಿನ ವೀನಶ್ರೀ ಪ್ರಶಸ್ತಿ ಪಡೆದರು.
ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ, ಕ್ರೀಡಾಳುಗಳಿಗೆ ಬಹುಮಾನ ವಿತರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಉಡುಪಿ ಹವ್ಯಾಸಿ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ದಿನೇಶ್ ಪುತ್ರನ್, ಪೂರ್ಣಪ್ರಜ್ಞ ಕಾಲೇಜಿನ ಆಡಳಿತ ಮಂಡಳಿ ಕಾರ್ಯದರ್ಶಿ ಡಾ. ಎ.ಪಿ. ಭಟ್, ಡಾ. ಜಿ.ಎಸ್. ಚಂದ್ರಶೇಖರ್ , ವಿಶ್ವಕಪ್ ವಿಜೇತ ಭಾರತೀಯ ಕಬಡ್ಡಿ ತಂಡದ ಸದಸ್ಯೆ ಧನಲಕ್ಷ್ಮಿ, ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲ ಡಾ. ರಾಮು ಎಲ್., ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕರಬ ಸ್ವಾಗತಿಸಿದರು. ಸಂಚಾಲಕ ಸುಕುಮಾರ್ ವಂದಿಸಿದರು. ಸಹಾಯಕ ಪ್ರಾಧ್ಯಾಪಕ ಸಂದೀಪ್ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಶಿವಕುಮಾರ್ ಅಲಗೊಡು ಕಾರ್ಯಕ್ರಮ ನಿರೂಪಿಸಿದರು.

