Thursday, September 12, 2024
Homeಉಡುಪಿಅಂಬಲಪಾಡಿ ಬಿಲ್ಲವ ಸೇವಾ ಸಂಘ : ಶ್ರೀ ಗುರು ಜಯಂತಿ ಆಚರಣೆ, ವಿದ್ಯಾರ್ಥಿ ವೇತನ ವಿತರಣೆ

ಅಂಬಲಪಾಡಿ ಬಿಲ್ಲವ ಸೇವಾ ಸಂಘ : ಶ್ರೀ ಗುರು ಜಯಂತಿ ಆಚರಣೆ, ವಿದ್ಯಾರ್ಥಿ ವೇತನ ವಿತರಣೆ

ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮೀಜಿಯವರ 170ನೇ ಜನ್ಮ ದಿನಾಚರಣೆಯನ್ನು ಆ.20ರಂದು ಭಜನಾ ಸೇವೆ, ಮಹಾ ಪೂಜೆ ಮತ್ತು ಅನ್ನ ಸಂತರ್ಪಣೆಯೊಂದಿಗೆ ಭಜನಾ ಮಂದಿರದಲ್ಲಿ ಆಚರಿಸಲಾಯಿತು.

ಬ್ರಹ್ಮಶ್ರೀ ನಾರಾಯಣ ಗುರುಗಳ ‘ಸಂಘಟನೆಯಿಂದ ಬಲಯುತರಾಗಿರಿ, ವಿದ್ಯಾರ್ಜನೆಯಿಂದ ಸ್ವತಂತ್ರರಾಗಿರಿ’ ಎಂಬ ಅಮೃತ ವಾಣಿಯಂತೆ ಶ್ರೀ ಗುರು ಜಯಂತಿಯ ಪ್ರಯುಕ್ತ ಎಸ್ಎಸ್ಎಲ್ಸಿ ಮತ್ತು ಪಿಯುಸಿ ತರಗತಿಗಳಲ್ಲಿ ಉತ್ತಮ ಅಂಕ ಪಡೆದ ಸಂಘದ ವ್ಯಾಪ್ತಿಯ ಬಿಲ್ಲವ ಸಮಾಜದ 19 ಮಂದಿ ವಿದ್ಯಾರ್ಥಿಗಳಿಗೆ ದಾನಿಗಳ ಉದಾರ ನೆರವಿನಿಂದ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು.

ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಅಧ್ಯಕ್ಷತೆಯಲ್ಲಿ ನಡೆದ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷ ಗೋಪಾಲ್ ಸಿ. ಬಂಗೇರ, ಸಾಮಾಜಿಕ ಮುಖಂಡ ಕೆ.ಉದಯ ಕುಮಾರ್ ಶೆಟ್ಟಿ, ಸಂಘದ ಉಪಾಧ್ಯಕ್ಷ ಶಿವದಾಸ್ ಪಿ., ಸಂಘದ ಮಹಿಳಾ ಘಟಕದ ಗೌರವ ಸಂಚಾಲಕಿ ವಿಜಯಾ ಜಿ. ಬಂಗೇರ, ಕ್ರಿಶ್ಚಿಯನ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ವೇತಾ ಶ್ರೀನಿವಾಸ್, ಉಡುಪಿ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ಮಾಹೆ ಮಣಿಪಾಲದ ಮಾಧ್ಯಮ ಸಹಾಯಕ ನಿರ್ದೇಶಕ ಸುರೇಶ್ ಕೋಟ್ಯಾನ್, ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜತೆ ಕಾರ್ಯದರ್ಶಿಗಳಾದ ಮಹೇಂದ್ರ ಕೋಟ್ಯಾನ್, ಅವಿನಾಶ್ ಕುಮಾರ್, ಮಹಿಳಾ ಘಟಕದ ಸಹ ಸಂಚಾಲಕಿಯರಾದ ದೇವಕಿ ಕೆ. ಕೋಟ್ಯಾನ್, ಜಯಂತಿ ಹರೀಶ್, ಕಾರ್ಯದರ್ಶಿ ವಾಣಿಶ್ರೀ ಅರುಣ್, ಭಜನಾ ಸಂಚಾಲಕರಾದ ಕೆ.ಮಂಜಪ್ಪ ಸುವರ್ಣ, ಶಂಕರ ಪೂಜಾರಿ ಸಹಿತ ಸಂಘದ ಆಡಳಿತ ಸಮಿತಿ ಮತ್ತು ಮಹಿಳಾ ಘಟಕದ ಸಮಿತಿ ಸದಸ್ಯರು, ಸಂಘದ ಸದಸ್ಯರು, ವಿದ್ಯಾರ್ಥಿಗಳು, ಪೋಷಕರು ಮತ್ತು ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular