Saturday, July 20, 2024
Homeಉಡುಪಿಅಂಬಲಪಾಡಿ : ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಿಜೆಪಿ ಮತ್ತು...

ಅಂಬಲಪಾಡಿ : ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಿಜೆಪಿ ಮತ್ತು ಎನ್. ಡಿ.ಎ. ಅಭ್ಯರ್ಥಿ ಪರ ಮತ ಯಾಚನೆ

ನೈರುತ್ಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿ ಡಾ/ ಧನಂಜಯ ಸರ್ಜಿ ಮತ್ತು ಎನ್.ಡಿ.ಎ. ಅಭ್ಯರ್ಥಿ ಎಸ್. ಎಲ್. ಭೋಜೇಗೌಡ ಪರವಾಗಿ ಅಂಬಲಪಾಡಿ, ಬಂಕೇರ್ಕಟ್ಟ, ಆಚಾರಿಗುಂಡಿ, ಕಾನಗುಡ್ಡೆ, ಪಂದುಬೆಟ್ಟು ಪ್ರದೇಶದಲ್ಲಿ ಪದವೀಧರ ಮತ್ತು ಶಿಕ್ಷಕ ಮತದಾರರನ್ನು ಮನೆ ಮನೆ ಭೇಟಿ ಮೂಲಕ ಸಂಪರ್ಕಿಸಿ ಮತ ಯಾಚಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಅಂಬಲಪಾಡಿ-ಕಡೆಕಾರು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ಅಂಬಲಪಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಯೋಗೀಶ್ ಶೆಟ್ಟಿ, ಅಂಬಲಪಾಡಿ ಬೂತ್ ಅಧ್ಯಕ್ಷ ಮಹೇಂದ್ರ ಕೋಟ್ಯಾನ್ ಹಾಗೂ ವಿನೋದ್ ಪೂಜಾರಿ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular