Saturday, January 18, 2025
Homeಅಪಘಾತಬೆಂಗಳೂರಿನಲ್ಲಿ ಆಂಬ್ಯುಲೆನ್ಸ್ ಡ್ರೈವರ್​ನ ಅಚಾತುರ್ಯ: ಸರಣಿ ಅಪಘಾತ

ಬೆಂಗಳೂರಿನಲ್ಲಿ ಆಂಬ್ಯುಲೆನ್ಸ್ ಡ್ರೈವರ್​ನ ಅಚಾತುರ್ಯ: ಸರಣಿ ಅಪಘಾತ

ಬೆಂಗಳೂರು: ಆಂಬ್ಯುಲೆನ್ಸ್ ಡಿಕ್ಕಿ ಪರಿಣಾಮ ಮೂರು ಕಾರು ಮತ್ತು ಒಂದು ಬೈಕ್ ನಡುವೆ ಸರಣಿ ಅಪಘಾತವಾದ ಘಟನೆ ನಿನ್ನೆ (ಏ.26) ರಾತ್ರಿ 10.45 ರ ಸುಮಾರಿಗೆ ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ನಡೆದಿದೆ. ಈ ವೇಳೆ ಬೈಕ್ ಸವಾರನ ಕಾಲಿಗೆ ಹಾಗೂ ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿ ಬಚಾವ್ ಆಗಿದ್ದಾರೆ. ಮಾರ್ಕೆಟ್​ನಿಂದ ಗುಡ್ಡದಹಳ್ಳಿ ಮಾರ್ಗವಾಗಿ ಆಂಬ್ಯುಲೆನ್ಸ್ ಚಾಲಕ ಸುಮಂತ್ ವೇಗವಾಗಿ ಬರುತ್ತಿದ್ದ. ಈ ಸಂದರ್ಭದಲ್ಲಿ ನಿಯಂತ್ರಣ ಸಿಗದೆ ನಿಂತಿದ್ದ ಕಾರಿಗೆ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಬ್ಯಾಟರಾಯನಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular