ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜು ಹೆಬ್ರಿ ಇಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಮಾತನಾಡಿದ ಪ್ರಾಂಶುಪಾಲರಾದ ಪ್ರಕಾಶ್ ಜೋಗಿ ಇವರು ಇಂದು ನಾವು ಅತಿಯಾದ ಇಂಗ್ಲಿಷ್ ಶಬ್ದಗಳ ಬಳಕೆಯಿಂದಾಗಿ ಕನ್ನಡದ ಶಬ್ದಗಳನ್ನು ಮರೆಯುತ್ತಿದ್ದೇವೆ. ಕನ್ನಡ ಉಳಿಯಬೇಕಾದರೆ ನಾವು ಕನ್ನಡವನ್ನು ನಿರಂತರ ಬಳಸಬೇಕು ಎಂದರು . ಸಾರ್ವಜನಿಕ ಸಂಪರ್ಕ ಅಧಿಕಾರಿ ವಿಜಯಕುಮಾರ್ ಶೆಟ್ಟಿ ಕನ್ನಡ ಉಪನ್ಯಾಸಕ ವೀಣೇಶ್ ಅಮೀನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಕುಮಾರಿ ಅನ್ನಪೂರ್ಣ ಮತ್ತು ಅಮೂಲ್ಯ ಶೆಟ್ಟಿ ಕನ್ನಡ ರಾಜ್ಯೋತ್ಸವದ ಕುರಿತು ಭಾಷಣ ಮಾಡಿದರು. ಕುಮಾರಿ ರಕ್ಷಿತಾ ಮತ್ತು ಭೂಮಿಕಾ ಕನ್ನಡ ಗೀತೆಗಳನ್ನು ಹಾಡಿದರು. ವಿದ್ಯಾರ್ಥಿನಿಯರು ಕನ್ನಡ ಗೀತೆಗಳಿಗೆ ನೃತ್ಯ ಮಾಡಿದರು. ವಿದ್ಯಾರ್ಥಿಗಳು ಉಪನ್ಯಾಸಕ ಹಾಗೂ ಬೋಧಕೇತರ ವೃಂದದವರು ಉಪಸ್ಥಿತರಿದ್ದರು. ಹಿಂದಿ ಉಪನ್ಯಾಸಕರಾದ ದತ್ತಾನಂದ ಇವರು ಕನ್ನಡದ ಶಾಲು ಹಾಕಿ ಸ್ವಾಗತಿಸಿದರು. ಪ್ರಥಮ ಪಿಯುಸಿ ವಿದ್ಯಾರ್ಥಿನಿ ವೈಷ್ಣವಿ ಕಾರ್ಯಕ್ರಮ ನಿರೂಪಿಸಿ ವಂದಸಿದರು.

