ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ) ಉಡುಪಿ ಜಿಲ್ಲೆ ಇವರು ಆಯೋಜಿಸಿದ ಹೆಬ್ರಿ ತಾಲ್ಲೂಕು ಮಟ್ಟದ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳ ಚಿತ್ರಕಲೆ ಸ್ಪರ್ಧೆಯು ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪ.ಪೂ ಕಾಲೇಜಿನಲ್ಲಿ ನಡೆಯಿತು.
ಅಮೃತ ಭಾರತಿ ಪ. ಪೂ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರಾಜೇಶ್ ನಾಯಕ್ ಉದ್ಘಾಟಿಸಿ ಚಿತ್ರಕಲೆ ಎನ್ನುವುದು ಭಗವಂತನ ಕೊಡುಗೆ. ಅದರಲ್ಲಿ ಪ್ರತೀ ಭಾರಿಯೂ ಹೊಸತನವನ್ನು ಮೂಡಿಸಲು ಪ್ರಯತ್ನಿಸಬೇಕು ಎಂದರು. ಪ್ರಾಂಶುಪಾಲರಾದ ಪ್ರಕಾಶ್ ಜೋಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಜಾ ಪ್ರಭುತ್ವದ ಮಹತ್ವವನ್ನು ತಿಳಿದುಕೊಳ್ಳಲು ಈ ಸ್ಪರ್ಧೆ ಸಹಕಾರಿಯಾಗಿದೆ ಎಂದರು.
ಸಂಖ್ಯಾ ಶಾಸ್ತ್ರ ಉಪನ್ಯಾಸಕರಾದ ಚಂದ್ರಹಾಸ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.