ಅಮೃತ ಭಾರತೀ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಸಮೀಕ್ಷ ಆರ್. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 3ನೇ ರ‍್ಯಾಂಕ್

0
32

ಉಡುಪಿ ಜಿಲ್ಲೆಯ ಹೆಬ್ರಿಯ ಮಿಥಿಲಾ ನಗರದಲ್ಲಿರುವ ಅಮೃತ ಭಾರತೀ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಸಮೀಕ್ಷ ಆರ್. ಅವರು 2026ರ ದ್ವಿತೀಯ ಪಿಯುಸಿ ವಾರ್ಷಿಕ ಬೋರ್ಡ್ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಅದ್ಭುತ ಸಾಧನೆ ಮಾಡಿದ್ದಾರೆ.

ಸಮೀಕ್ಷ‌ ಆರ್. ಅವರು ಸಂಸ್ಕೃತ, ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಹಾಗೂ ಕಂಪ್ಯೂಟರ್ ಸೈನ್ಸ್ ವಿಷಯಗಳಲ್ಲಿ ತಲಾ 100ರಲ್ಲಿ 100 ಅಂಕಗಳನ್ನು ಪಡೆದು, ಒಟ್ಟು 600ರಲ್ಲಿ 597 ಅಂಕಗಳನ್ನು ಗಳಿಸಿದ್ದಾರೆ. ಈ ಸಾಧನೆಯೊಂದಿಗೆ ಅವರು ರಾಜ್ಯ ಮಟ್ಟದಲ್ಲಿ 3ನೇ ರ್ಯಾಂಕ್ ಪಡೆದಿದ್ದಾರೆ.

ಈ ಮಹತ್ವದ ಸಾಧನೆಗೆ ಅಮೃತ ಭಾರತೀ ಟ್ರಸ್ಟ್ ಅಧ್ಯಕ್ಷರಾದ ಪಾಂಡುರಂಗ ರಮಣ ನಾಯಕ್, ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕರು ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ. ಸಮೀಕ್ಷರ್ ಅವರ ಸಾಧನೆ ಸಂಸ್ಥೆಗೆ ಗೌರವ ತಂದಿದ್ದು, ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿದೆ.

LEAVE A REPLY

Please enter your comment!
Please enter your name here