ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಇವರ ವತಿಯಿಂದ ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಉಡುಪಿ ಇಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಹೆಬ್ರಿಯ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸಾತ್ವಿಕ್ ಸೈನ್ಸ್ ಮಾಡೆಲ್ಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ , ರಕ್ಷಿತಾ ಜನಪದ ಗೀತೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನ , ಹಾಗೂ ಅನುಷಾ ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ ಇವರಿಗೆ ಆಡಳಿತ ಮಂಡಳಿ , ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದ
ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

