ಶಾಲಾ ಶಿಕ್ಷಣ ಇಲಾಖೆ ನಡೆಸಿದ ಕಾರ್ಕಳ ತಾಲೂಕು ಮಟ್ಟದ ಚಕ್ರ ಎಸೆತ ಸ್ಪರ್ಧೆಯಲ್ಲಿ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿ ನಿತೀಶ್ ಪ್ರಥಮ ಸ್ಥಾನವನ್ನು ಮತ್ತು ಎತ್ತರ ಜಿಗಿತದಲ್ಲಿ 10ನೇ ತರಗತಿಯ ವಿದ್ಯಾರ್ಥಿ ಧನ್ವಿತ್ ಡಿ ಶೆಟ್ಟಿ ಪ್ರಥಮಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ವಿದ್ಯಾರ್ಥಿಗಳನ್ನು ಮತ್ತು ತರಬೇತಿ ನೀಡಿದ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ನಿಶಾನ್ ಶೆಟ್ಟಿ ಇವರನ್ನು ಸಂಸ್ಥೆಯ ಮುಖ್ಯಸ್ಥೆ ಅಪರ್ಣಾ ಆಚಾರ್ ಅಭಿನಂದಿಸಿದ್ದಾರೆ.

