ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್ ಸಂಬಂಧಿತ ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬಾಲವರ್ಗದಲ್ಲಿ ಗಣಿತ ಮಾದರಿ ಪ್ರದರ್ಶನದಲ್ಲಿ ಪ್ರಥಮ ಮತ್ತುವಿಜ್ಞಾನ ಪತ್ರವಾಚನದಲ್ಲಿ ತೃತೀಯ ಸ್ಥಾನವನ್ನು ಮನಸ್ವಿ ಉಡುಪ, ವಿಜ್ಞಾನ ಮಾದರಿಯಲ್ಲಿ ಪ್ರಥಮ ಸ್ಥಾನವನ್ನು ರತನ್, ವಿಜ್ಞಾನ ಮಾದರಿಯಲ್ಲಿ ಸ್ವಚ್ಛ ಭಾರತ ವಿಷಯದಲ್ಲಿ ಪ್ರಥಮ ಸ್ಥಾನವನ್ನು ವೃಷೋಧರ, ಕಥಾ ಕಥನದಲ್ಲಿ ದ್ವಿತೀಯ ಸ್ಥಾನ ಪ್ರಾರ್ಥನಾ, ಗಣಿತ ಪ್ರಯೋಗದಲ್ಲಿ ದ್ವಿತೀಯ ಸ್ಥಾನ ಅಕ್ಷತಾ, ವಿಜ್ಞಾನ ಪ್ರಯೋಗದಲ್ಲಿ ದ್ವಿತೀಯ ಸ್ಥಾನ ಶ್ರೇಯಾ ಪೈ, ವಿಜ್ಞಾನ ಪ್ರಯೋಗದಲ್ಲಿ ದ್ವಿತೀಯ ಸ್ಥಾನ ಶಾಶ್ವತ್, ಸಂಸ್ಕೃತಿ ಜ್ಞಾನ ರಸಪ್ರಶ್ನೆಯಲ್ಲಿ ತೃತೀಯ ಸ್ಥಾನವನ್ನು ಧನ್ವಿತ್ ಪಡೆದಿದ್ದಾರೆ. ವಿದ್ಯಾರ್ಥಿಗಳನ್ನು ಮತ್ತು ತರಬೇತಿ ನೀಡಿದ ಶಿಕ್ಷಕರನ್ನು ಸಂಸ್ಥೆಯ ಮುಖ್ಯಸ್ಥೆ ಅಪರ್ಣಾ ಆಚಾರ್ ಅಭಿನಂದಿಸಿದ್ದಾರೆ.

