ಹೆಬ್ರಿ: ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್ ಸಂಬಂಧಿತ ರಾಜ್ಯಮಟ್ಟದ ಕ್ರೀಡಾಕೂಟವು ಬೀದರ್ ನಲ್ಲಿ ನಡೆಯಿತು. ವಾಲಿಬಾಲ್ ಪಂದ್ಯಾವಳಿಯಲ್ಲಿ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ರಜತ ಪದಕದೊಂದಿಗೆ ಪ್ರಶಸ್ತಿ ಪತ್ರ , ರನ್ನರ್ಸ್ ಫಲಕವನ್ನು ಪಡೆದಿದ್ದಾರೆ. ವಿದ್ಯಾರ್ಥಿಗಳನ್ನು ಮತ್ತು ತರಬೇತಿ ನೀಡಿದ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ನಿಶಾನ್ ಶೆಟ್ಟಿ ಇವರನ್ನು ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಮುಖ್ಯಸ್ಥರು ಅಭಿನಂದಿಸಿದ್ದಾರೆ.

