Monday, July 15, 2024
Homeನಿಧನಬಿಜೆಪಿಯ ಸಕ್ರಿಯ ಕಾರ್ಯಕರ್ತ ಅಪಘಾತದಿಂದ ಮೃತ

ಬಿಜೆಪಿಯ ಸಕ್ರಿಯ ಕಾರ್ಯಕರ್ತ ಅಪಘಾತದಿಂದ ಮೃತ

ಕೋಟೆಕಾರು ಅಡ್ಕ ಬಳಿ ಹೆದ್ದಾರಿ ದಾಟುತ್ತಿರುವ ಸಂದರ್ಭದಲ್ಲಿ ವ್ಯಕ್ತಿಯೋರ್ವರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ ಘಟನೆಯೊಂದು ಶುಕ್ರವಾರ ನಡೆದಿದೆ.

ಕೋಟೆಕಾರು ನೆಲ್ಲಿಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನಿವಾಸಿ ಶ್ರೀಕಾಂತ್‌ (46) ಎಂಬುವವರೇ ಮೃತಪಟ್ಟವರು.

ಹೆದ್ದಾರಿ ದಾಟುತ್ತಿದ್ದ ಸಂದರ್ಭದಲ್ಲಿ ಕೇರಳದಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಶ್ರೀಕಾಂತ್‌ ಅವರಿಗೆ ಗಂಭೀರ ಗಾಯವಾಗಿದ್ದು, ಅಪಘಾತ ನಡೆಸಿದ ಕಾರು ಚಾಲಕನೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶ್ರೀಕಾಂತ್‌ ಅವರು ಮೃತ ಹೊಂದಿದ್ದಾರೆ.

ಶ್ರೀಕಾಂತ್‌ ಅವರು ಆಟೋ ಎಲೆಕ್ಟ್ರಿಷಿಯನ್‌ ಕೆಲಸ ಮಾಡುತ್ತಿದ್ದು, ಇವರು ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದರು. ಅವಿವಾಹಿತರಾಗಿದ್ದ ಇವರು ತಾಯಿ, ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಈ ಘಟನೆ ಸಂಬಂಧ ಮಂಗಳೂರು ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular