ಉತ್ತಮ ದೈಹಿಕ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡುತ್ತಿರುವ ಸಂಸ್ಥೆ

0
5

ಮೂಡುಬಿದಿರೆಯಲ್ಲಿ ಕಳೆದ ನಾಲ್ಕು ದಶಕಗಳಿಂದ ದೈಹಿಕ ವಿದ್ಯಾರ್ಥಿಗಳನ್ನು ಉತ್ತಮ ರೀತಿಯಲ್ಲಿ ತರಬೇತುಗೊಳಿಸಿ ಸಮಾಜಕ್ಕೆ ನೀಡುತ್ತಿರುವ ಎಂಕೆ ಅನಂತ್ರಾರಾಜ್ ದೈಹಿಕ ಶಿಕ್ಷಣ ಮಹಾವಿದ್ಯಾಲಯ ಬಹಳ ಉತ್ತಮ ಕೆಲಸವನ್ನು ನಿರ್ವಹಿಸುತ್ತಿದೆ ಎನ್ನುವುದಕ್ಕೆ ಸಂತಸವಾಗುತ್ತಿದೆ ಎಂದು ಮಾಜಿ ಸಚಿವ, ಮಹಾವೀರ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಕೆ ಅಭಯ ಚಂದ್ರ ಜೈನ್ ಶ್ಲಾಘಿಸಿದರು.

ಅವರು ಆಗಸ್ಟ್ 7ರಂದು ಕಾಲೇಜು ಸಭಾಂಗಣದಲ್ಲಿ ನಡೆದ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವನ್ನು ನೆರವೇರಿಸಿ ಮಾತನಾಡುತ್ತಿದ್ದರು. ವೇದಿಕೆಯಲ್ಲಿ ಕಾಲೇಜು ಪ್ರಾಂಶುಪಾಲ ಡಾ.ರಾಧಾಕೃಷ್ಣ, ಸಮಾಜ ಮಂದಿರ ಸಭಾ ಕಾರ್ಯದರ್ಶಿ ಸುರೇಶ್ ಪ್ರಭು, ಹಾಜರಿದ್ದರು.

ದೈಹಿಕ ಶಿಕ್ಷಣ ಕಾಲೇಜು ಪ್ರಾಂಶುಪಾಲ ಧನಂಜಯ ಶೆಟ್ಟಿ ಕೆ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ವಿದ್ಯಾರ್ಥಿಗಳಾದ ವೀಕ್ಷಿತ ಸ್ವಾಗತಿಸಿದರು. ಸುಶ್ಮಿತಾ ಕಾರ್ಯಕ್ರಮ ನಿರ್ವಹಿಸಿದರು. ನಿಕಿತಾ ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು. ಆಕಾಶ್ ವಂದಿಸಿದರು.

ವರದಿ ರಾಯಿ ರಾಜ ಕುಮಾರ್