ಪಣಿಯೂರು ಅಂಗನವಾಡಿಯಲ್ಲಿ ‘ಅಂಗನವಾಡಿ ಮಿಲನ’ ಕಾರ್ಯಕ್ರಮ

0
21

ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರ ಜನ್ಮದಿನ ಪ್ರಯುಕ್ತ ಸೇವಾ ಸಂಕಲ್ಪದಡಿಯಲ್ಲಿ ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ದಿನಾಂಕ 26-09-2026 ರಂದು ಪಣಿಯೂರು ಸೆಂಟರ್ ಅಂಗನವಾಡಿ ಯಲ್ಲಿ ಆಯೋಜಿಸಲಾದ “ಅಂಗನವಾಡಿ ಮಿಲನ” ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ನೀತಾ ಗುರುರಾಜ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಕಾಪು ಮಂಡಲ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾದ ಪವಿತ್ರ ಗಿರೀಶ್, ಉಷಾ, ಶಕುಂತಲಾ ಹಾಗೂ ಪೋಷಕರು ಉಪಸ್ಥಿತರಿದ್ದರು.