ಪುತ್ತೂರು: ಲೋಕಸಭಾ ಚುನಾವಣೆಗೆ ಸಂಬಂಧಿಸಿದ ಕರ್ತವ್ಯ ನಿರ್ವಹಣೆಯ ವೇಳೆಗೆ ಅಂಗನವಾಡಿ ಕಾರ್ಯಕರ್ತೆಯೊಬ್ಬರಿಗೆ ಮಹಿಳೆಯೊಬ್ಬರು ಹಲ್ಲೆ ಮಾಡಿದ ಘಟನೆ ನಡೆದಿದೆ. ಮನೆ ಮನೆಗೆ ಮತ ಚೀಟಿ ನೀಡಲೆಂದು ಆಗಮಿಸಿದ್ದ ರೋಟರಿಪುರ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ ಮಾಡಲಾಗಿದೆ.
ಚುನಾವಣಾಧಿಕಾರಿ ಸೂಚನೆಯಂತೆ ಏ 16 ರಂದು ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಚೀಟಿ ವಿತರಣೆ ಕಾರ್ಯವಿತ್ತು. ಈ ಹಿನ್ನೆಲೆಯಲ್ಲಿ ರೋಟರಿಪುರದ ಅಂಗನವಾಡಿ ಕಾರ್ಯಕರ್ತೆ ಜಯಶ್ರೀ ಮನೆ ಭೇಟಿ ನೀಡುತ್ತಿದ್ದ ವೇಳೆ ಫಾತಿಮಾ ಎಸ್ ಎಂಬವರು ಹಲ್ಲೆ ನಡೆಸಿರುವುದಾಗಿ ದೂರಲಾಗಿದೆ.
ಗಾಯಗೊಂಡ ಅಂಗನವಾಡಿ ಕಾರ್ಯಕರ್ತೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.