ಅಂತರ್ ರಾಜ್ಯ ‘ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್-2026’ಗೆ ಅನ್ನಪೂರ್ಣ ಮಹೇಶ ಮನ್ನಾಪುರ ಆಯ್ಕೆ

0
10

ಕೊಪ್ಪಳ : ದೂರದರ್ಶನ ಹಾಗೂ ಆಕಾಶವಾಣಿ ಕಲಾವಿದೆ, ಸಾಹಿತ್ಯ, ಸಂಗೀತ ಮತ್ತು ನೃತ್ಯ ಕ್ಷೇತ್ರದ ಸಾಧಕಿ ಅನ್ನಪೂರ್ಣ ಮಹೇಶ ಮನ್ನಾಪುರ ಅವರನ್ನು **ಅಂತರ್ ರಾಜ್ಯ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್-2026″**ಗೆ ಆಯ್ಕೆ ಮಾಡಲಾಗಿದೆ.

ಜುಲೈ 26ರಂದು ಕನ್ನಡ ಭವನದಲ್ಲಿ ನಡೆಯಲಿರುವ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ಅಂಗವಾಗಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶ್ರೀಮತಿ ಅನ್ನಪೂರ್ಣ ಮಹೇಶ ಮನ್ನಾಪುರ ಅವರು ಸಂಗೀತಗಾರ್ತಿ, ಸಾಹಿತಿ ಹಾಗೂ ನೃತ್ಯ ನಿರ್ದೇಶಕಿಯಾಗಿ ಗುರುತಿಸಿಕೊಂಡಿದ್ದಾರೆ. ವೀರರಾಣಿ ಕಿತ್ತೂರು ಚೆನ್ನಮ್ಮ ರಾಜ್ಯ ಪ್ರಶಸ್ತಿ ಪುರಸ್ಕೃತರಾಗಿರುವ ಅವರು ಆಕಾಶವಾಣಿ ಮತ್ತು ದೂರದರ್ಶನದ ಮಾನ್ಯತೆ ಪಡೆದ ಕಲಾವಿದೆಯೂ ಆಗಿದ್ದಾರೆ.

ಇದುವರೆಗೆ ಅವರ 18 ಕೃತಿಗಳು ಪ್ರಕಟಗೊಂಡಿದ್ದು, 40ಕ್ಕೂ ಹೆಚ್ಚು ಧ್ವನಿಸುರುಳಿಗಳಿಗೆ ಗಾಯನ ನೀಡಿದ್ದಾರೆ. ರಾಜ್ಯ, ಅಂತರ್ ರಾಜ್ಯ ಹಾಗೂ ರಾಷ್ಟ್ರಮಟ್ಟದ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕನ್ನಡ ಕಲೆ ಮತ್ತು ಸಂಸ್ಕೃತಿಯ ಪ್ರಚಾರಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ.

ಅವರ ಬಹುಮುಖ ಸಾಧನೆಯನ್ನು ಗುರುತಿಸಿ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್-2026” ನೀಡಿ ಗೌರವಿಸಲಾಗುತ್ತಿದೆ.