ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಕಡಂದಲೆ ಮೈನ್ ಇಲ್ಲಿ ಡಿಸೆಂಬರ್ 7, 2025 ಭಾನುವಾರದಂದು ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಆಯೋಜಿಸಲಾಗಿದೆ.
ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ಹಳೆ ವಿದ್ಯಾರ್ಥಿ ಸಂಘದ ಜಂಟಿ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ಈ ಸಮಾರಂಭದಲ್ಲಿ ಶಾಲಾ ಮಕ್ಕಳು ಮತ್ತು ಹಳೆಯ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಮನರಂಜನಾ ಕಾರ್ಯಕ್ರಮಗಳು ಪ್ರದರ್ಶನಗೊಳ್ಳಲಿವೆ. ಬೆಳಗ್ಗೆ 9.30ಕ್ಕೆ ಧ್ವಜಾರೋಹಣದ ಮೂಲಕ ಸಮಾರಂಭಕ್ಕೆ ಚಾಲನೆ, ಸಂಜೆ 4.30 ರಿಂದ ಅಂಗನವಾಡಿ ಪುಟಾಣಿಗಳು , ಶಾಲಾ ಮಕ್ಕಳು ಮತ್ತು ಹಳೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸಂಜೆ 7 ಗಂಟೆಗೆ ಸಭಾ ಕಾರ್ಯಕ್ರಮ , ರಾತ್ರಿ 9 ರಿಂದ ತುಳು ಹಾಸ್ಯಮಯ ನಾಟಕ ಕೈತಾಲ್ ಪೊವೊಡ್ಚಿ ಪ್ರದರ್ಶನಗೊಳ್ಳಲಿದೆ .

