ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಆ ದಿನ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡುವಂತೆ ಮಂಗಳೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರು ತಿಳಿಸಿದ್ದಾರೆ. ಮತದಾನದ ದಿನದಂದು ಜಿಲ್ಲೆಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳ ಮಾಲೀಕರು ತಮ್ಮ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಒಂದು ದಿನದ ವೇತನ ರಜೆ ನೀಡಬೇಕು. ಒಂದು ವೇಳೆ ತಪ್ಪಿದಲ್ಲಿ ಸಂಬಂಧಪಟ್ಟ ಸಂಸ್ಥೆ, ನಿಯೋಜಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.