ಬೆಂಗಳೂರು: ಶೇಷಾದ್ರಿಪುರಂ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಾರ್ಷಿಕ 2024-25 ಸಾಲಿನ ಕ್ರೀಡಾ ಸಾಂಸ್ಕೃತಿಕ, ಸಾಹಿತ್ಯಿಕ ಬಹುಮಾನ ವಿತರಣೆ ಸಮಾರಂಭ ನಡೆಯಿತು.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಮಾಜಿ ಸೈನಿಕರು, ರಾಷ್ಟ್ರೀಯ ವಾಲಿಬಾಲ್ ಕ್ರೀಡಾಪಟು ಪಿ.ದಿವ್ಯಪ್ರಸಾದ್ ಅವರನ್ನು ಸಂಸ್ಥೆಯ ಸಹಕಾರ್ಯದರ್ಶಿ ಎಂ.ಎಸ್.ನಟರಾಜ್ ಸನ್ಮಾನಿಸಿದರು.
ಮುಖ್ಯ ಅತಿಥಿಗಳಾಗಿ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಎನ್.ಪಿ.ಕಾರ್ತಿಕ್ , ಪ್ರಾಂಶುಪಾಲ ಪ್ರೊ.ಆರ್.ವಿ.ಮಂಜುನಾಥ್, ಸಾಂಸ್ಕೃತಿಕ ಸಮಿತಿಯ ಸಂಚಾಲಕ ಡಾ. ಎಸ್.ರಾಮಲಿಂಗೇಶ್ವರ (ಸಿಸಿರಾ), ದೈಹಿಕ ಶಿಕ್ಷಣ ಉಪನ್ಯಾಸಕರಾದ ಗುರುರಾಜ್ ಮತ್ತಿತರರು ಭಾಗವಹಿಸಿದ್ದರು.