Saturday, December 14, 2024
HomeSportಕ್ರೀಡೆವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ-2024

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ-2024

“ಅವಕಾಶಗಳ ಸದುಪಯೋಗ ಸದೃಢ ಜೀವನಕ್ಕೆ ಅಡಿಪಾಯ” : ನವೀನ್‌ ಭಂಡಾರಿ
 ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ ಶಿಸ್ತುಬದ್ಧವಾದ ಪಥಸಂಚಲನ
 ರಾಷ್ಟ್ರಮಟ್ಟವನ್ನು ಪ್ರತಿನಿಧಿಸಿದ ಕಾಲೇಜಿನ ಕ್ರೀಡಾಪಟುಗಳಿಂದ ಕ್ರೀಡಾಜ್ಯೋತಿಯ ಪ್ರಜ್ವಲನೆ

ಪುತ್ತೂರು : “ಸ್ವಾಮಿ ವಿವೇಕಾನಂದರ ತತ್ವ-ಆದರ್ಶಗಳ ಅಡಿಪಾಯದಲ್ಲಿ ಮುನ್ನಡೆಯುತ್ತಿರುವ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಅವಕಾಶಗಳಿಗೆ ಯಾವುದೇ ಬರವಿಲ್ಲ.ವಿದ್ಯಾರ್ಥಿಗಳು ತಮ್ಮ ಇಚ್ಚಾಶಕ್ತಿ,ಕ್ರೀಡಾಶಕ್ತಿ ಹಾಗೂ ವಿದ್ಯಾಶಕ್ತಿಯನ್ನು ಜೀವನದಲ್ಲಿ ಅಳವಡಿಸಿಕೊಂಡರೆ, ಸದೃಢ ಆರೋಗ್ಯದ ಜತೆಗೆ ಭವಿಷ್ಯದ ಉತ್ತುಂಗಕ್ಕೆ ಏರಲು ಸಾಧ್ಯವಿದೆ.” ಎರಡು ವರ್ಷಗಳ ವಿದ್ಯಾರ್ಥಿ ಜೀವನದ ವಿವಿಧ ಒತ್ತಡಗಳನ್ನು ಬದಿಗಿರಿಸಿಕೊಂಡು, ತಮ್ಮೊಳಗಿನ ಕ್ರೀಡಾಪಟುವನ್ನು ಗುರುತಿಸಿ, ಇಂದಿನ ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಬೇಕೆಂದು ಕಡಬ ಹಾಗೂ ಪುತ್ತೂರು ತಾಲೂಕಿನ ಕಾರ್ಯನಿರ್ವಹಣಾಧಿಕಾರಿ ನವೀನ್‌ ಭಂಡಾರಿ ಇವರು ಕರೆ ನೀಡಿದರು. ಅವರು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಕ್ರೀಡಾಕೂಟದ ಮುಖ್ಯ ಅತಿಥಿಗಳಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿ, ರಾಷ್ಟ್ರಮಟ್ಟದ ಕ್ರೀಡಾಪಟು ಹಾಗೂ ರಾಮಕೃಷ್ಣ ಪ್ರೌಢಶಾಲೆಯ ದೈಹಿಕ ಶಿಕ್ಷಣ ನಿರ್ದೇಶಕರಾದ ಅಜಿತ್‌ ಇವರು ಭಾಗವಹಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತಮಂಡಳಿಯ ಸದಸ್ಯರಾದ
ಇಂದಿರಾ ಬಿ.ಕೆ ಇವರು ವಹಿಸಿಕೊಂಡು “ಪ್ರತಿಯೊಬ್ಬ ವಿದ್ಯಾರ್ಥಿಯು ಒಂದಲ್ಲ ಒಂದು ಕನಸನ್ನು
ಹೊತ್ತಿರುತ್ತಾನೆ. ತಾನೊಬ್ಬ ಉತ್ತಮ ಕ್ರೀಡಾಪಟುವಾಗಬೇಕೆನ್ನುವ ಕನಸು ಒಂದೆಡೆಯಾದರೆ, ಉತ್ತಮ
ಉದ್ಯೋಗದ ಆಕಾಂಕ್ಷೆ ಇನ್ನೊಂದೆಡೆ. ಇವೆಲ್ಲವುಗಳಿಗೆ ಬೆನ್ನೆಲುಬಾಗಿ ನಿಂತು, ಕ್ರೀಡಾ ಕ್ಷೇತ್ರ, ಸಾಂಸ್ಕೃತಿಕ
ಕ್ಷೇತ್ರ ಹಾಗೂ ಶಿಕ್ಷಣ ಕ್ಷೇತ್ರ ಇವುಗಳಲ್ಲಿ ತಮ್ಮ ಮಕ್ಕಳು ಸಾಧನೆ ಮಾಡಬೇಕೆನ್ನುವ ಹೆತ್ತವರ ಹಂಬಲಕ್ಕೆ
ಬೆಂಬಲವಾಗಿ ವಿವೇಕಾನಂದ ವಿದ್ಯಾಸಂಸ್ಥೆ ಇಂದು ಕಾರ್ಯನಿರ್ವಹಿಸುತ್ತಿದೆ. ಇಂತಹ ವಿದ್ಯಾಸಂಸ್ಥೆಗೆ
ದಾಖಲುಗೊಂಡ ವಿದ್ಯಾರ್ಥಿಗಳು ತಮ್ಮ ಕನಸುಗಳನ್ನು ನನಸಾಗಿಸಲು ದೊರೆಯುವ ಎಲ್ಲಾ
ಅವಕಾಶಗಳನ್ನು ಗುರುತಿಸಿ, ಅದರ ಸದುಪಯೋಗವನ್ನು ಪಡೆಯಬೇಕು. ಕ್ರೀಡೆಯಲ್ಲಿ ಸೋಲು,ಗೆಲುವು
ಸಾಮಾನ್ಯ. ಗೆಲುವು ಸಾಧಿಸಿದ ವಿದ್ಯಾರ್ಥಿ ಉತ್ತಮ ನಾಯಕನಾದರೆ, ಸೋತವನು ಉತ್ತಮ
ಮಾರ್ಗದರ್ಶಕನಾಗಬಲ್ಲ. ಆದುದರಿಂದ ವಿದ್ಯಾರ್ಥಿಗಳು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ
ಭವಿಷ್ಯವನ್ನು ರೂಪಿಸಿಕೊಳ್ಳಬೇಕು” ಎಂದು ಆಶಿಸಿದರು.
ವಾರ್ಷಿಕ ಕ್ರೀಡಾಕೂಟದ ಪ್ರಯುಕ್ತ ಕ್ರೀಡಾಸಮವಸ್ತ್ರವನ್ನು ಧರಿಸಿದ ಕಾಲೇಜಿನ ವಿದ್ಯಾರ್ಥಿಗಳು
ಶಿಸ್ತುಬದ್ಧವಾದ ಪಥಸಂಚಲನವನ್ನು ನಡೆಸಿದರು. ಆಯಾ ತರಗತಿ ಪ್ರತಿನಿಧಿಗಳು ಮುಖ್ಯ ಅತಿಥಿಗಳಿಗೆ
ತಮ್ಮ ತರಗತಿ ಹಾಗೂ ತರಗತಿಯ ಕ್ರೀಡಾ ಸಾಧಕರನ್ನು ಪರಿಚಯಿಸಿದರು. ರಾಷ್ಟ್ರಮಟ್ಟವನ್ನು
ಪ್ರತಿನಿಧಿಸಿದ ಕಾಲೇಜಿನ ಕ್ರೀಡಾಪಟುಗಳು ಕ್ರೀಡಾಜ್ಯೋತಿಯನ್ನು ಬೆಳಗಿಸಿ ಮುಖ್ಯ ಅತಿಥಿಗಳಿಗೆ
ಹಸ್ತಾಂತರಿಸಿದರು. ಬಳಿಕ ರಾಷ್ಟ್ರಮಟ್ಟದ ಕಬಡ್ಡಿ, ಖೋ-ಖೋ , ವಾಲಿಬಾಲ್‌, ಅಥ್ಲೆಟಿಕ್ಸ್‌ ಹಾಗೂ
ಕರಾಟೆಯಲ್ಲಿ ಕಾಲೇಜನ್ನು ಪ್ರತಿನಿಧಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮದ ವೇದಿಕೆಯಲ್ಲಿ ಕಾಲೇಜು ಆಡಳಿತಮಂಡಳಿ ಅಧ್ಯಕ್ಷರಾದ ರವೀಂದ್ರ ಪಿ. ಇವರು
ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್‌ ಅವರ ಮಾರ್ಗದರ್ಶನದೊಂದಿಗೆ
ಕ್ರೀಡಾಪ್ರತಿನಿಧಿಗಳಿಗೆ ಪ್ರಮಾಣವಚನ ಬೋಧಿಸಲಾಯಿತು. ಯತೀಶ್‌ ಕುಮಾರ್‌ ಹಾಗೂ ಡಾ.ಜ್ಯೋತಿ

ಇವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಮಹೇಶ್‌
ನಿಟಿಲಾಪುರ, ಉಪಪ್ರಾಂಶುಪಾಲರಾದ ದೇವಿಚರಣ್‌ ರೈ ಉಪನ್ಯಾಸಕ ಹಾಗೂ ಉಪನ್ಯಾಸಕೇತರ
ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ಕ್ರೀಡಾ ಜತೆ ಕಾರ್ಯದರ್ಶಿಯಾದ
ತ್ರಿಷಾ ಸ್ವಾಗತಿಸಿ, ಕ್ರೀಡಾ ಕಾರ್ಯದರ್ಶಿಯಾದ ಕೀರ್ತನ್‌ ಎಸ್.‌ ಕೆ. ವಂದಿಸಿದರು. ಉಪನ್ಯಾಸಕರಾದ ಪಿ.
ಕೆ. ಪರಮೇಶ್ವರ ಶರ್ಮ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.

RELATED ARTICLES
- Advertisment -
Google search engine

Most Popular