ಎಸ್‌ವಿಕೆ–ಎಸ್‌ವಿಎಸ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

0
4

ಕಟಪಾಡಿಯ ಎಸ್‌ವಿಕೆ–ಎಸ್‌ವಿಎಸ್ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ಹಾಗೂ ಕಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟವು ಶಾಲಾ ಆವರಣದಲ್ಲಿ ಸಂಭ್ರಮದಿಂದ ಜರುಗಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಉಡುಪಿ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ರವೀಂದ್ರ ನಾಯ್ಕ್ ಅವರು ಕ್ರೀಡಾ ಜ್ಯೋತಿಯನ್ನು ಬೆಳಗಿಸಿ ಉದ್ಘಾಟಿಸುತ್ತ ಮಾತನಾಡಿದ ಅವರು, ವಿದ್ಯಾರ್ಥಿಗಳು ಪ್ರತಿದಿನ ಬೆಳಗ್ಗೆ ಬೇಗ ಎದ್ದು ದಿನನಿತ್ಯದ ಚಟುವಟಿಕೆಗಳಲ್ಲಿ ಉತ್ಸಾಹದಿಂದ ಭಾಗವಹಿಸಬೇಕು. ಕ್ರೀಡೆಗಳನ್ನು ಕೇವಲ ಒಂದು ದಿನ ಅಭ್ಯಾಸ ಮಾಡಿದರೆ ಸಾಲದು, ನಿರಂತರವಾಗಿ ಪ್ರತಿದಿನ ಅಭ್ಯಾಸ ಮಾಡಬೇಕು. ಕ್ರೀಡೆಗಳು ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯೊಂದಿಗೆ ಸಮಗ್ರ ವ್ಯಕ್ತಿತ್ವ ವಿಕಸನಕ್ಕೂ ಸಹಕಾರಿಯಾಗುತ್ತವೆ. ಕ್ರೀಡಾ ಕ್ಷೇತ್ರದಲ್ಲಿಯೂ ಸಾಧಕರಾಗಿ ಗುರುತಿಸಿಕೊಂಡರೆ ಭವಿಷ್ಯದಲ್ಲಿ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ಹೇಳಿದರು.

ಶಾಲಾ ಸಂಚಾಲಕರಾದ ಕೆ. ಸತ್ಯೇಂದ್ರ ಪೈ ಅವರು ಅತಿಥಿಗಳಿಗೆ ಕೃತಜ್ಞತೆ ಸಲ್ಲಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಆಡಳಿತ ಮಂಡಳಿ ಸದಸ್ಯರಾದ ಬಿ. ಚಂದ್ರಕಾಂತ್ ಪೈ, ಶ್ರೀ ಶ್ರೀನಿವಾಸ ಕಿಣಿ, ಆಡಳಿತಾಧಿಕಾರಿ ಸುಧಾಕರ್ ಬ್ರಹ್ಮಾವರ್, ಮುಖ್ಯ ಶಿಕ್ಷಕಿ ಸುಜಾ ಡಿ’ಸೋಜಾ, ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ರಾಘವೇಂದ್ರ ಆಚಾರ್ಯ, ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ್ ಹಾಗೂ ಪೋಷಕರು ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನ ನಡೆಸಿಕೊಟ್ಟರು. ವಿವಿಧ ಹೌಸ್ ತಂಡಗಳು ಶಿಸ್ತು ಮತ್ತು ಒಗ್ಗಟ್ಟನ್ನು ಪ್ರದರ್ಶಿಸಿದವು. ವಿದ್ಯಾರ್ಥಿನಿ ಆಯೇಷಾ ಶಝ ಅವರು ಕ್ರೀಡಾ ಪ್ರಮಾಣವಚನ ಬೋಧಿಸಿದರು. ವಿದ್ಯಾರ್ಥಿನಿಯರಾದ ಕ್ಷಮ್ಯ ಮತ್ತು ತನಿಶಿ ಪ್ರಾರ್ಥಿಸಿದರು. ರೂಬಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಹರಿಣಿ ಸ್ವಾಗತಿಸಿ, ಆಶಾ ವಂದಿಸಿದರು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿ. ರವೀಂದ್ರ ನಾಯ್ಕ್ ಅವರು ಬಲೂನುಗಳನ್ನು ಹಾರಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳು ಉತ್ಸಾಹದಿಂದ ಕ್ರೀಡಾಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿಗಳನ್ನು ವಿತರಿಸಲಾಯಿತು. ದೀಪಿಕಾ ವಿಜೇತರ ಪಟ್ಟಿಯನ್ನು ವಾಚಿಸಿದರು.