ಅನುದಾನಿತ ವಿದ್ಯಾದಾಯಿನೀ ಪ್ರೌಢ ಶಾಲೆಯಲ್ಲಿ ವಾರ್ಷಿಕ ಕ್ರೀಡಾ ಕೂಟ

0
4

ಸುರತ್ಕಲ್ : ಕ್ರೀಡೆಯು ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪೂರಕವಾಗಿದ್ದು, ಶಿಸ್ತು, ಸಮಯಪ್ರಜ್ಞೆ, ಆತ್ಮವಿಶ್ವಾಸ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುತ್ತದೆ. ಕ್ರೀಡೆಯಲ್ಲಿ ಸೋಲು-ಗೆಲುವಿಗಿಂತ ಭಾಗವಹಿಸುವ ಮನೋಭಾವ ಮತ್ತು ಕ್ರೀಡಾಸ್ಫೂರ್ತಿ ಮುಖ್ಯ. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆಗೂ ಸಮಾನ ಆದ್ಯತೆ ನೀಡಬೇಕು ಎಂದು ಅಗರಿ ಎಂಟರ್‌ಪ್ರೆೈಸಸ್, ಸುರತ್ಕಲ್ ಇಲ್ಲಿನ ಮಾಲಕರಾದ ಅಗರಿ ರಾಘವೇಂದ್ರ ರಾವ್ ಇವರು ಹಿಂದು ವಿದ್ಯಾದಾಯಿನೀ ಸಂಘದ ಆಡಳಿತಕ್ಕೊಳಪಟ್ಟ ಸುರತ್ಕಲ್‌ನ ಅನುದಾನಿತ ವಿದ್ಯಾದಾಯಿನೀ ಪ್ರೌಢ ಶಾಲೆಯಲ್ಲಿ ನಡೆದ ವಾರ್ಷಿಕ ಕ್ರೀಡಾ ಕೂಟವನ್ನು ದೀಪ ಪ್ರಜ್ವಲನೆಗೈದು ಉದ್ಘಾಟಿಸಿ ಮಾತನಾಡಿದರು.

ವೇದಿಕೆಯಲ್ಲಿ ಮುಖ್ಯಅತಿಥಿಗಳಾಗಿ ಭಾಗವಹಿಸಿದ ಹಿಂದು ವಿದ್ಯಾದಾಯಿನೀ ಸಂಘ (ರಿ), ಸುರತ್ಕಲ್ ಇಲ್ಲಿನ ಉಪಾಧ್ಯಕ್ಷರಾದ ರಮೇಶ್ ಟಿ.ಎನ್ ಇವರು ಶಾಲಾಧ್ವಜವನ್ನು ಹಾರಿಸಿ ಗೌರವ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಇಂದಿನ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆಗೂ ಹೆಚ್ಚಿನ ಆದ್ಯತೆ ನೀಡಬೇಕು. ಕ್ರೀಡೆಯು ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಲು ಮತ್ತು ವ್ಯಕ್ತಿತ್ವ ವಿಕಸನಕ್ಕೆ ಉತ್ತಮ ವೇದಿಕೆಯಾಗಿದೆ.

ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಆರೋಗ್ಯಕರ ಜೀವನಶೈಲಿ ಹಾಗೂ ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಸಾಧ್ಯ ಎಂದು ಶುಭ ಹಾರೈಸಿದರು. ಇನ್ನೋರ್ವ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಮಂಗಳೂರಿನ ಖ್ಯಾತ ವಕೀಲರು ಹಾಗೂ ವಿದ್ಯಾದಾಯಿನೀ ಹಳೆ ವಿದ್ಯಾರ್ಥಿ ಸಂಘ ಇದರ ಅಧ್ಯಕ್ಷರಾದ ಹೆಚ್.ವಿ.ರಾಘವೇಂದ್ರ ವಾರ್ಷಿಕ ಕ್ರೀಡಾ ಕೂಟದ ಚಿತ್ರವಿನ್ಯಾಸ (ಲೋಗೋ) ಅನಾವರಣ ಮಾಡಿ ಕ್ರೀಡೆಯು ಕೇವಲ ಬಹುಮಾನ ಮತ್ತು ಪದಕಗಳನ್ನು ಗೆಲ್ಲುವುದಕ್ಕೆ ಸೀಮಿತವಾಗಿರದೆ, ಶಿಸ್ತು, ಒಗ್ಗಟ್ಟು, ಪರಸ್ಪರ ಗೌರವ ಮತ್ತು ಸಹಕಾರದ ಮೌಲ್ಯಗಳನ್ನು ಕಲಿಸುತ್ತದೆ. ಸೋಲಿನಿಂದ ನಿರಾಶರಾಗದೆ ಗೆಲುವಿನ ಗುರಿಯೊಂದಿಗೆ ನಿರಂತರ ಪ್ರಯತ್ನ ಮಾಡಬೇಕು. ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿಯೂ ಉತ್ತಮ ಸಾಧನೆ ಮಾಡಿ ಶಾಲೆ ಹಾಗೂ ನಾಡಿಗೆ ಕೀರ್ತಿ ತರಬೇಕು ಎಂದು ಶುಭ ಹಾರೈಸಿದರು. ವಿರಾಟ್ ಇದರ ಕಾರ್ಯದರ್ಶಿಯಾದ ಪಿ.ವಿ ಗಿರೀಶ್ ಇವರು ಕ್ರೀಡಾಜ್ಯೋತಿ ಬೆಳಗಿಸಿ ಕ್ರೀಡಾ ಸ್ಪೂರ್ತಿಯಿಂದ ಭಾಗವಹಿಸಿದ ಎಲ್ಲಾ ಕ್ರೀಡಾಳುಗಳಿಗೆ ಶುಭ ಹಾರೈಸಿದರು.

ಕ್ರೀಡಾ ಕೂಟದ ಅಧ್ಯಕ್ಷತೆಯನ್ನು ಹಿಂದು ವಿದ್ಯಾದಾಯಿನೀ ಸಂಘದ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಶಾಲಾ ಸಂಚಾಲಕರಾದ ಸುಧಾಕರರಾವ್ ಪೇಜಾವರ್ ವಹಿಸಿ, ಕ್ರೀಡಾ ಸ್ಪೂರ್ತಿಯಿಂದ ಭಾಗವಹಿಸುವ ಎಲ್ಲಾ ಕ್ರೀಡಾಳುಗಳಿಗೆ ಶುಭ ಹಾರೈಸಿದರು.


ವೇದಿಕೆಯಲ್ಲಿ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀಹರಿ ಎಂ , ವಿದ್ಯಾದಾಯಿನೀ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ಡಾ. ಶಶಿಕುಮಾರ್, ಶಾಲಾನಿವೃತ್ತ ಮುಖ್ಯೋಪಾಧ್ಯಾಯರುಗಳಾದ ದೇವಪ್ಪ ವಸಂತ ಕುಮಾರ್ ನಾಯ್ಕ್, ಉಪಸ್ಥಿತರಿದ್ದು ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ದಿವಸ್ಪತಿ ಎಲ್ಲರನ್ನು ಸ್ವಾಗತಿಸಿದರು. ಸಹ ಶಿಕ್ಷಕಿಯಾದ ಉಮಾವತಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಈ ಸಂದರ್ಭದಲ್ಲಿ ಹಿಂದು ವಿದ್ಯಾದಾಯಿನೀ ಸಂಘದ ಕಾರ್ಯದರ್ಶಿಗಳಾದ ಎಚ್ ಶ್ರೀರಂಗ, ವಿದ್ಯಾದಾಯಿನೀ ಸ್ಪೋರ್ಟ್ಸ್ ಅಕಾಡೆಮಿ ಇದರ ಸಂಯೋಜಕರಾಗಿರುವ ಸುಬ್ರಹ್ಮಣ್ಯ ಟಿ, ಆಗಮಿಸಿ ಕ್ರೀಡಾಳುಗಳಿಗೆ ಶುಭ ಹಾರೈಸಿದರು. ಅಂತಿಮವಾಗಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿಯಾದ ಕುಮಾರಿ ಸೌಮ್ಯ ಇವರ ಮಾರ್ಗದರ್ಶನದಲ್ಲಿ ಕ್ರೀಡಾಕೂಟವು ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಸಂಘದ ಸಮೂಹ ಸಂಸ್ಥೆಯಾದ ವಿದ್ಯಾದಾಯಿನೀ ಆಂಗ್ಲ ಮಾದ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಕಿಶೋರ್ ಹಾಗೂ ರೇಷ್ಮಾ , ಗೋವಿಂದ ದಾಸ ಪದವಿ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಪ್ರಶಾಂತ್, ಜಿ.ಎಚ್.ಎಸ್ ಐದನೇ ಬ್ಲಾಕ್ ಕಾಟಿಪಳ್ಳ ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕಿ ರಾಜಶ್ರೀ, ಶಾಲಾ ಸಹ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ವರ್ಗ, ಹಳೆ ವಿದ್ಯಾರ್ಥಿ ಸಂಘ ಮತ್ತು ರಕ್ಷಕ ಶಿಕ್ಷಕ ಸಂಘದ ಸರ್ವ ಸದಸ್ಯರ ಸಹಕಾರದೊಂದಿಗೆ ಅತ್ಯುತ್ತಮವಾಗಿ ಸಂಘಟಿಸಲ್ಪಟ್ಟು ಸಂಪನ್ನಗೊಂಡಿತು.