Wednesday, January 15, 2025
Homeಕುಂದಾಪುರಅನೂಪ್ ಪೂಜಾರಿ ಅವರ ಅಂತ್ಯಸಂಸ್ಕಾರ: ಸೌಮ್ಯ ಮತ್ತು ಗೌರವಪೂರ್ವಕ ವಿಧಿವಿಧಾನ

ಅನೂಪ್ ಪೂಜಾರಿ ಅವರ ಅಂತ್ಯಸಂಸ್ಕಾರ: ಸೌಮ್ಯ ಮತ್ತು ಗೌರವಪೂರ್ವಕ ವಿಧಿವಿಧಾನ

ಕುಂದಾಪುರ: ಜಮ್ಮು ಮತ್ತು ಕಾಶ್ಮೀರದ ಪೂಂಬ್ ಜಿಲ್ಲೆಯಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ಹುತಾತ್ಮರಾದ ಕುಂದಾಪುರ ತಾಲ್ಲೂಕಿನ ಯೋಧ ಅನೂಪ್ ಪೂಜಾರಿ ಅವರಿಗೆ ಸಕಲ ಸರಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ ನೆರವೇರಿತು. ಬೆಳಗ್ಗೆ 9ಕ್ಕೆ ತೆಕ್ಕಟ್ಟೆಯಿಂದ ತೆರೆದ ವಾಹನದಲ್ಲಿ ಅವರ ಪಾರ್ಥೀವ ಶರೀರವನ್ನು ಕೋಟೇಶ್ವರ ಮೂಲಕವಾಗಿ ಮೆರವಣಿಗೆ ನಡೆಸಿ ಹುಟ್ಟೂರಾದ ಬೀಜಾಡಿಗೆ ತರಲಾಗಿತ್ತು.

ಬೀಜಾಡಿ ಗ್ರಾಮದ ಮನೆಯಲ್ಲಿ ಅಂತಿಮ ವಿಧಿವಿಧಾನ ನಡೆಯಿತು. ಕುಟುಂಬದ ಆಪ್ತರಿಗೆ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಆ ಬಳಿಕ ಅವರು ಕಲಿತ ಬೀಜಾಡಿಪಡು ಸರ್ಕಾರಿ ಶಾಲೆ ಮೈದಾನದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಆಪ್ತರು, ಸಾರ್ವಜನಿಕರು, ಶಾಲಾ ಮಕ್ಕಳು, ಅಧಿಕಾರಿಗಳು, ಜನಪ್ರತಿನಿಧಿಗಳು ಅಂತಿಮ ನಮನ ಸಲ್ಲಿಸಿದರು. ಅನೂಪ್ ಅವರ ಅಂತಿಮ ದರ್ಶನಕ್ಕಾಗಿ ಸಾವಿರಾರು ಮಂದಿ ಬೀಜಾಡಿಯಲ್ಲಿ ಸೇರಿದ್ದರು.

ಮೃತದೇಹವನ್ನು ಮನೆಗೆ ತಂದಾಗ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು. ಸೇರಿದ್ದ ಜನರು ಭಾರತ್ ಮಾತಾ ಕಿ ಜೈ, ಅನೂಪ್ ಪೂಜಾರಿ ಅಮರ್ ರಹೇ ಘೋಷಣೆಗಳನ್ನು ಕೂಗಿದರು. ಅಗಲಿದ ಯೋಧನಿಗೆ ಸಕಲ ಸರ್ಕಾರಿ ಹಾಗೂ ಸೇನಾ ಗೌರವ ಸಲ್ಲಿಸಲಾಯಿತು. ಸಮುದ್ರ ತೀರದ ಸರ್ಕಾರಿ ಜಮೀನಿನಲ್ಲಿ ಅನೂಪ್ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಲಾಗಿತ್ತು. ಪತ್ನಿ ಮಂಜುಶ್ರೀಗೆ ತ್ರಿವರ್ಣ ಧ್ವಜ ಹಸ್ತಾಂತರಿಸಲಾಯಿತು. ಬೀಜಾಡಿ ಕಡಲ ತೀರದಲ್ಲಿ ಅನೂಪ್ ಅವರ ಅಂತ್ಯಸಂಸ್ಕಾರ ನಡೆಯಿತು. ಅನೂಪ್ ಪಾರ್ಥಿವ ಶರೀರಕ್ಕೆ ಅವರ ಸಹೋದರ ಅಗ್ನಿಸ್ಪರ್ಶ ಮಾಡಿದರು. ಅಂತಿಮ ವಿಧಿ-ವಿಧಾನದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಗುರುರಾಜ್ ಗಂಟೆಹೊಳೆ ಸೇರಿದಂತೆ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್, ಸೇನಾ ಸಿಬ್ಬಂದಿ ಭಾಗಿಯಾಗಿದ್ದರು. ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಿತು.

RELATED ARTICLES
- Advertisment -
Google search engine

Most Popular