ರಾಯಚೂರು : ರಾಜ್ಯದಲ್ಲಿ ಕೋಮು, ಸಂಘರ್ಷ ಸೇರಿದಂತೆ ಹತ್ಯೆಗಳು ಹೆಚ್ಚಾದಂತೆ ಕಾಣುತ್ತಿದೆ. ಈಗಾಗಲೇ ಹುಬ್ಬಳ್ಳಿಯ ನೇಹ ಕೊಲೆ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದೆ. ನಿನ್ನೆ ಯಾದಗಿರಿಯಲ್ಲಿ ಮುಸ್ಲಿಂ ಯುವಕನಿಂದ ದಲಿತ ಯುವಕನ ಹತ್ಯೆ ಮಾಡಲಾಗಿತ್ತು. ಇದೀಗ ಅದೇ ರೀತಿಯಾಗಿ ರಾಯಚೂರಿನಲ್ಲೊಂದು ಘಟನೆ ನಡೆದಿದೆ. ತನ್ನ ಪತ್ನಿಯೊಂದಿಗೆ ಮುಸ್ಲಿಂ ವ್ಯಕ್ತಿ ಅನೈತಿಕ ಸಂಬಂಧ ಹೊಂದಿದ್ದ ಹಿನ್ನೆಲೆ ಮುಸ್ಲಿಂ ವ್ಯಕ್ತಿಯನ್ನು ಪತಿ ಕೊಚ್ಚಿ ಕೊಲೆಗೈದಿರುವಂತಹ ಘಟನೆ ಜಿಲ್ಲೆಯ ಮಸ್ಕಿ ತಾಲ್ಲೂಕಿನ ಬಳಗನೂರು ಪಟ್ಟಣದಲ್ಲಿ ನಡೆದಿದೆ.
ಮಾರುತಿ(29) ಎಂಬಾತನಿಂದ ಡ್ರೈವರ್ ಆಗಿದ್ದ ಖಾದರ್ ಬಾಬಾಸಾಬ್ (32) ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಬಳಗನೂರು ಪೊಲೀಸರು ಭೇಟಿ ಮಾಡಿ ಪರಿಶೀಲನೆ ಮಾಡಿದ್ದು, ಸದ್ಯ ಆರೋಪಿ ಮಾರುತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಳಗನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.