ದೇಶದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಆಂಧ್ರಪ್ರದೇಶದದಲ್ಲಿ ಮಹಿಳೆಯ ಮೇಲೆ ನಾಲ್ವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿ ಬಳಿಕ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಭೀಕರ ಘಟನೆ ನಡೆದಿದೆ.
ಮಹಿಳೆಯ ವಿರುದ್ಧ ನಾಲ್ವರು ಸಾಮೂಹಿಕ ಹತ್ಯೆ ಮಾಡಿದ್ದಾರೆ. ಕಳೆದ ತಿಂಗಳು ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಕ್ಟೋಬರ್ 15ರಂದು ಮಹಿಳೆ ನಾಪತ್ತೆಯಾಗಿದ್ದು, ಅಕ್ಟೋಬರ್ 17ರಂದು ಆಕೆಯ ಶವ ಪತ್ತೆಯಾಗಿತ್ತು. ಪತ್ನಿಯ ಸಾವು ಅನುಮಾನಾಸ್ಪದ ಎಂದು ಪತಿ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದರಿಂದ ನಾಪತ್ತೆ ಪ್ರಕರಣವನ್ನು ಕೊಲೆ ಪ್ರಕರಣವನ್ನಾಗಿ ಪರಿವರ್ತಿಸಲಾಗಿದೆ ಎಂದು ಡಿಎಸ್ಪಿ ಭವ್ಯಾ ಕಿಶೋರ್ ಬಹಿರಂಗಪಡಿಸಿದ್ದಾರೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಲಯವು ರಿಮಾಂಡ್ ವಿಧಿಸಿದೆ.