ಬಿ.ಸಿ.ರೋಡ್ : ಕರುನಾಡು ಚಾರಿಟೇಬಲ್ ಟ್ರಸ್ಟ್ (ರಿ.), ಕರ್ನಾಟಕದ 2026ರ ಜೂನ್ ತಿಂಗಳ 13ನೇ ಮಾಸಿಕ ಸೇವಾ ಯೋಜನೆ ಅಂಗವಾಗಿ ಕಡಬ ತಾಲೂಕಿನ ಪೆರಾಜೆ ಗ್ರಾಮದ ಸೋಮಶೇಖರ್ ಅವರಿಗೆ ಚಿಕಿತ್ಸಾ ವೆಚ್ಚಕ್ಕಾಗಿ ₹10,000 ಧನಸಹಾಯ ಹಸ್ತಾಂತರಿಸಲಾಯಿತು.
ಸೋಮಶೇಖರ್ ಅವರು ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಅವರ ಕಾಲು ಸಂಪೂರ್ಣ ಮುರಿತಕ್ಕೊಳಗಾಗಿದೆ. ಪ್ರಸ್ತುತ ಅವರು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹೆಚ್ಚಿನ ಚಿಕಿತ್ಸೆಗೆ ಆರ್ಥಿಕ ನೆರವಿನ ಅಗತ್ಯವಿದೆ.
ಈ ಹಿನ್ನೆಲೆಯಲ್ಲಿ ಕರುನಾಡು ಚಾರಿಟೇಬಲ್ ಟ್ರಸ್ಟ್ ತನ್ನ ಮಾಸಿಕ ಸೇವಾ ಯೋಜನೆಯಡಿ ₹10,000 ಧನಸಹಾಯವನ್ನು ಜೂನ್ 30ರಂದು ಬಿ.ಸಿ.ರೋಡ್‌ನ ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿಯಲ್ಲಿ ಹಸ್ತಾಂತರಿಸಿತು.
ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಸೇವಾ ಮಾಣಿಕ್ಯರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದು, ಈ ಸೇವಾ ಕಾರ್ಯಕ್ಕೆ ಸಹಕರಿಸಿದ ಎಲ್ಲ ದಾನಿಗಳು ಹಾಗೂ ಸಮಾಜದ ಸಹೃದಯರಿಗೆ ಟ್ರಸ್ಟ್ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.
ಸಮಾಜಮುಖಿ ಸೇವಾ ಚಟುವಟಿಕೆಗಳ ಮೂಲಕ ಅಗತ್ಯವಿರುವವರಿಗೆ ನೆರವಾಗುವ ಉದ್ದೇಶದಿಂದ ಕರುನಾಡು ಚಾರಿಟೇಬಲ್ ಟ್ರಸ್ಟ್ ನಿರಂತರವಾಗಿ ಮಾಸಿಕ ಸೇವಾ ಯೋಜನೆಯನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದೆ.

