ಹೃದಯಾಘಾತಕ್ಕೆ ಮತ್ತೊಬ್ಬ ವಿದ್ಯಾರ್ಥಿನಿ ಬಲಿ

0
16

ಹಾಸನ :ಬೆಂಗಳೂರಿನಲ್ಲಿ ವಾಸವಾಗಿದ್ದ ಹಾಸನ ಮೂಲದ ಪದವಿ ವಿದ್ಯಾರ್ಥಿನಿ ಸುಪ್ರಿಯಾ (20) ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಈ ಘಟನೆಯೊಂದಿಗೆ, ಹಾಸನದಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಈ ಘಟನೆ ಸ್ಥಳೀಯರಲ್ಲಿ ಆತಂಕವನ್ನುಂಟು ಮಾಡಿದೆ.

ಸುಪ್ರಿಯಾ ಎಂಬ ವಿದ್ಯಾರ್ಥಿನಿ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಟ್ಟಳ್ಳಿ ಗ್ರಾಮದ ನಿವಾಸಿಯಾಗಿದ್ದರು. ಅವರು ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ವಾಸವಾಗಿದ್ದು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಪದವಿ ಶಿಕ್ಷಣವನ್ನು ಪಡೆಯುತ್ತಿದ್ದರು. ಜೂನ್ 25 ಸಂಜೆ, ಆಕೆ ಏಕಾಏಕಿ ಕುಸಿದು ಬಿದ್ದಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ವೈದ್ಯರು ಆಕೆಯನ್ನು ಉಳಿಸಲಾಗಲಿಲ್ಲ. ಹೃದಯಾಘಾತವೇ ಸಾವಿನ ಕಾರಣ ಎಂದು ವೈದ್ಯರು ದೃಢಪಡಿಸಿದ್ದಾರೆ.
ಈ ಘಟನೆಯಿಂದ ಸುಪ್ರಿಯಾ ಅವರ ಕುಟುಂಬದವರು ಮತ್ತು ಸ್ನೇಹಿತರು ಆಘಾತಕ್ಕೆ ಒಳಗಾಗಿದ್ದಾರೆ. ‘ಸುಪ್ರಿಯಾ ಆರೋಗ್ಯವಾಗಿದ್ದಳು, ಯಾವುದೇ ಆರೋಗ್ಯ ಸಮಸ್ಯೆಯ ಬಗ್ಗೆ ತಿಳಿದಿರಲಿಲ್ಲ,’ ಎಂದು ಆಕೆಯ ಸಂಬಂಧಿಯೊಬ್ಬರು ತಿಳಿಸಿದ್ದಾರೆ. ಹಾಸನ ಜಿಲ್ಲೆಯಲ್ಲಿ ಕಳೆದ ಕೆಲವು ತಿಂಗಳುಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದವರ ಸಂಖ್ಯೆ ಚಿಂತಾಜನಕವಾಗಿ ಏರಿಕೆಯಾಗುತ್ತಿದೆ.
ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

LEAVE A REPLY

Please enter your comment!
Please enter your name here