ಕಾಡಾನೆ ದಾಳಿಗೆ ಮತ್ತೊಂದು ಬಲಿ: ಮಡಿಕೇರಿಯಲ್ಲಿ PU ವಿದ್ಯಾರ್ಥಿನಿ ಮೃತ್ಯು

0
107

ಕಾಡಾನೆ ದಾಳಿಗೆ ಮತ್ತೊಂದು ಬಲಿ ಎನ್ನುವಂತೆ ಮಡಿಕೇರಿಯಲ್ಲಿ ವಿದ್ಯಾರ್ಥಿನಿಯೊಬ್ಬರನ್ನು ಕಾಡಾನೆ ತುಳಿದು ಸಾಯಿಸಿದೆ.

ಮಡಿಕೇರಿ ತಾಲ್ಲೂಕಿನ ಬೆಟ್ಟತೂರು ಗ್ರಾಮದಲ್ಲಿ ಗಿರೀಶ್ ಎಂಬುವರ ಪುತ್ರಿ ಪೂಜಾ(17) ಕಾಡಾನೆ ದಾಳಿಗೆ ಮೃತಳಾದ ವಿದ್ಯಾರ್ಥಿನಿ , ಮೃತ ಪೂಜಾ ಮಡಿಕೇರಿಯ ಸಂತ ಮೈಕಲ್ ಶಾಲೆಯಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು.

ಕಾಲೇಜು ಮುಗಿಸಿಕೊಂಡು ಪೂಜಾ ತಮ್ಮ ಊರು ಬೆಟ್ಟತೂರಿಗೆ ಬಸ್ಸಿನಿಂದ ಬಂದಿಳಿದ್ದಿದ್ದು, ಮನೆಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಏಕಾಏಕಿ ಕಾಡಾನೆ ಪೂಜಾ ಮಾಲೆ ದಾಳಿ ಮಾಡಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತ ಯುವತಿ ಪೂಜಾ ಅವರ ಶವವನ್ನು ಮಡಿಕೇರಿಯ ಸರ್ಕಾರಿ ಆಸ್ಪತ್ರೆಯ ಶಾವಾಗಾರದಲ್ಲಿ ಇರಿಸಲಾಗಿದೆ. ಘಟನೆಯಿಂದಾಗಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದರೇ, ಕಾಡಾನೆ ನಿಯಂತ್ರಿಸದ ಅರಣ್ಯಾಧಿಕಾರಿಗಳ ವಿರುದ್ಧ ಬೆಟ್ಟತೂರು ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.

LEAVE A REPLY

Please enter your comment!
Please enter your name here