ಬೆಂಗಳೂರು : ಭರತನಾಟ್ಯ ಕಲಾವಿದೆ, ಲೇಖಕಿ, ಸಂಘಟಕಿ, ಸಂಪನ್ಮೂಲ ವ್ಯಕ್ತಿ ಹಾಗೂ ಭೂಮಿಕಾ ಪ್ರತಿಷ್ಠಾನ ಉಡುಪುಮೂಲೆ (ರಿ.), ಎಡನೀರು ಸಂಸ್ಥೆಯ ಸ್ಥಾಪಕಾಧ್ಯಕ್ಷೆ ವಿದುಷಿ ಅನುಪಮಾ ರಾಘವೇಂದ್ರ ಅವರು ಕನ್ನಡ ಭವನದಿಂದ ನೀಡಲಾಗುವ ಪ್ರತಿಷ್ಠಿತ ‘ಅಂತರ್‌ರಾಜ್ಯ ಕನ್ನಡ ಪಯಸ್ವಿನಿ ಕಲಾ ರತ್ನ ಅಚೀವ್‌ಮೆಂಟ್ ಅವಾರ್ಡ್–2026’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಜುಲೈ 26ರಂದು ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮದ ಅಂಗವಾಗಿ ನಡೆಯಲಿರುವ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಅವರಿಗೆ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.
ಈ ವಿಷಯವನ್ನು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭರತನಾಟ್ಯ, ಸಾಹಿತ್ಯ, ಸಂಘಟನೆ ಹಾಗೂ ಸಮಾಜಮುಖಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಪರಿಗಣಿಸಿ ವಿದುಷಿ ಅನುಪಮಾ ರಾಘವೇಂದ್ರ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅವರ ಈ ಸಾಧನೆಗೆ ವಿವಿಧ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಕಲಾ ವಲಯಗಳಿಂದ ಅಭಿನಂದನೆಗಳು ವ್ಯಕ್ತವಾಗಿವೆ.

