ಬೆಳ್ತಂಗಡಿಯ ಪ್ರತಿಭಾನ್ವಿತ ಕ್ರೀಡಾಪಟು ಕು| ಅನ್ವಿತಾ ಅವರು ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕದ 5ನೇ ಮಿನಿ ಕ್ರೀಡಾಕೂಟ–2026ರ ಕಬಡ್ಡಿ ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದು ಅಮೋಘ ಸಾಧನೆ ಮಾಡಿರುವುದು ಅತ್ಯಂತ ಸಂತೋಷದ ಸಂಗತಿಯಾಗಿದೆ.

ತಮ್ಮ ಕ್ರೀಡಾ ಪ್ರತಿಭೆ, ಪರಿಶ್ರಮ ಹಾಗೂ ಅಪ್ರತಿಮ ಆಟದ ಮೂಲಕ ರಾಜ್ಯಮಟ್ಟದಲ್ಲಿ ಮಿಂಚಿ ಬೆಳ್ತಂಗಡಿ ತಾಲೂಕು ಮಾತ್ರವಲ್ಲದೆ ಇಡೀ ದಕ್ಷಿಣ ಕನ್ನಡ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿರುವ ಮುಂಡೂರು ಗ್ರಾಮದ ಕು.ಅನ್ವಿತಾ ಅವರನ್ನು ಶಾಸಕರಾದ ಹರೀಶ್ ಪೂಂಜರವರು ಭೇಟಿ ಮಾಡಿ ಅಭಿನಂದಿಸಿದರು ಈ ಸಂದರ್ಭದಲ್ಲಿ ಬಿಜೆಪಿ ಶಕ್ತಿಕೇಂದ್ರ ಅಧ್ಯಕ್ಷರು, ಬೂತ್ ಸಮಿತಿ, ಕಾರ್ಯಕರ್ತರು ಉಪಸ್ಥಿತರಿದ್ದರು.

