ಬೆಂಗಳೂರು : ನಾರಾಯಣಗುರು ಅಭಿವೃದ್ಧಿ ನಿಗಮಗೆ ಸರ್ಕಾರದಿಂದ ಹೆಚ್ಚಿನ ಅನುದಾನ ಒದಗಿಸುವಂತೆ ನಿಗಮದ ಅಧ್ಯಕ್ಷ ಮಂಜುನಾಥ್ ಪೂಜಾರಿ ಅವರು ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಮನವಿಯನ್ನು ಸ್ವೀಕರಿಸಿದ ಬಿಕೆ ಹರಿಪ್ರಸಾದ್ ಅವರು, ನಿಗಮಕ್ಕೆ ಅಗತ್ಯ ಅನುದಾನ ಒದಗಿಸುವ ಕುರಿತು ಮುಖ್ಯಮಂತ್ರಿ ಅವರ ಗಮನಕ್ಕೆ ತರುವುದಾಗಿ ಭರವಸೆ ನೀಡಿದ್ದಾರೆ.

