ಮೂಡುಬಿದಿರೆ: 9 ವಿವಿಧ ಆಶಾ ಸೇವೆಗಳನ್ನು ಆಶಾ ನಿಧಿ ತಂತ್ರಾಂಶದಲ್ಲಿ ನಿಷ್ಕ್ರಿಯಗೊಳಿಸಿರುವುದನ್ನು ವಿರೋಧಿಸಿ ಹಾಗೂ ಸಮಸ್ತ ಆಪ್ ಮೂಲಕ ದಾಖಲಾತಿ ಮಾಡುವುದನ್ನು ಕೈ ಬಿಡಬೇಕು ಎನ್ನುವ ಬೇಡಿಕೆ ಸೇರಿದಂತೆ ಇತರ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಎಐಯುಟಿಯುಸಿ ಗೆ ಸಂಯೋಜಿತವಾದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಮನವಿ ಪತ್ರವನ್ನು ಸ್ವೀಕರಿಸಿದ ಜಿಲ್ಲಾ ಆರೋಗ್ಯ ಅಧಿಕಾರಿಗಳು ಮೇಲಧಿಕಾರಿಗಳ ಜೊತೆಯಲ್ಲಿ ಚರ್ಚಿಸಿ ತಿಳಿಸುತ್ತೇನೆ ಎಂದರು. ಸಂಘದ ಜಿಲ್ಲಾ ಅಧ್ಯಕ್ಷರಾದ ಶೋಭಾ ನಾಯ್ಕ, ಜಿಲ್ಲಾ ಕಾರ್ಯದರ್ಶಿ ತಿರುಮಲ ನೇತೃತ್ವದ ನಿಯೋಗದಲ್ಲಿ ಎಲ್ಲಾ ತಾಲೂಕುಗಳ ನಾಯಕರು ಹಾಗೂ ಇನ್ನಿತರ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
ವರದಿ: ಶೋಭಾ ನಾಯ್ಕ್

