ಮಂಗಳೂರು : ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಆಧಾರವಾಗಿಸಿಕೊಂಡು ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯನ್ನು ಉದ್ದೇಶಿಸಿಕೊಂಡಿರುವ ರಾಮಕೃಷ್ಣ ಮಿಷನ್ ಬಾಲಕಾಶ್ರಮ, ಮಂಗಳೂರು ಸಂಸ್ಥೆಯಲ್ಲಿ 2026–27ನೇ ಶೈಕ್ಷಣಿಕ ಸಾಲಿನ 8ನೇ ತರಗತಿ ಪ್ರವೇಶಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
1951ರಲ್ಲಿ ಮಂಗಳೂರಿನ ಮಂಗಳಾದೇವಿಯಲ್ಲಿ ಸ್ಥಾಪಿತವಾದ ರಾಮಕೃಷ್ಣ ಮಿಷನ್ ಬಾಲಕಾಶ್ರಮವು ಕಳೆದ 75 ವರ್ಷಗಳಿಂದ ಅನೇಕ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿಕೊಂಡಿದ್ದು, ಇಂದು ಅದರ ಹಳೆ ವಿದ್ಯಾರ್ಥಿಗಳು ದೇಶದ ವಿವಿಧ ಭಾಗಗಳಲ್ಲಿ ಪ್ರತಿಷ್ಠಿತ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಆಶ್ರಮದ ವಾತಾವರಣದಲ್ಲಿ ಸ್ವಾಮೀಜಿಯವರ ಮೇಲ್ವಿಚಾರಣೆಯಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳು, ಶಿಸ್ತು, ಸೇವಾಭಾವ ಮತ್ತು ಜೀವನ ಕೌಶಲ್ಯಗಳ ತರಬೇತಿ ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಶಿಕ್ಷಣ, ಊಟ ಮತ್ತು ವಸತಿ ಸೌಲಭ್ಯಗಳನ್ನು ಸಂಪೂರ್ಣ ಉಚಿತವಾಗಿ ಒದಗಿಸಲಾಗುತ್ತದೆ. ಇದರಿಂದ ವಿದ್ಯಾರ್ಥಿಗಳ ಸರ್ವತೋಮುಖ ವ್ಯಕ್ತಿತ್ವ ವಿಕಸನಕ್ಕೆ ಅವಕಾಶ ಕಲ್ಪಿಸಲಾಗಿದೆ.
7 ನೇ ತರಗತಿಯಲ್ಲಿಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ, ಗಂಡು ಮಕ್ಕಳು ಮಾತ್ರಅರ್ಜಿಯನ್ನುಇಲ್ಲಿಗೆ ಸಲ್ಲಿಸಬಹುದು. 8 ನೇ ತರಗತಿಗೆ ಮಾತ್ರ ಪ್ರವೇಶ ನೀಡುವುದಾಗಿದ್ದು ಮೊದಲ ಆದ್ಯತೆಯನ್ನುದಕ್ಷಿಣಕನ್ನಡ, ಉಡುಪಿ, ಕಾಸರಗೋಡು, ಉತ್ತರಕನ್ನಡ, ಶಿವಮೊಗ್ಗ ಹಾಗೂಚಿಕ್ಕಮಗಳೂರು ಜಿಲ್ಲೆಯ ವಿದ್ಯಾರ್ಥಿಗಳಿಗೆ ನೀಡಲಾಗುವುದು.
ಅರ್ಜಿ ಸಲ್ಲಿಸಲು ಜನವರಿ 25 2026, ಆದಿತ್ಯವಾರ, ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿ ಹಾಗೂ ನಿಯಮಾವಳಿ ಪ್ರತಿಗಾಗಿರಾಮಕೃಷ್ಣ ಮಿಷನ್ ಬಾಲಕಾಶ್ರಮದಕಚೇರಿಯನ್ನು 0824-241 4216, +91 90196 29023ಈ ಸಂಖ್ಯೆಯಲ್ಲಿ ಬೆಳಗ್ಗೆ 8 ರಿಂದ ಮಧ್ಯಾಹ್ನ 10ರವರೆಗೆ ಮತ್ತು ಸಂಜೆ 4 ರಿಂದ 6 ಗಂಟೆಯವರೆಗೆ ಸಂಪರ್ಕಿಸಬಹುದು.
ವಿದ್ಯಾರ್ಥಿಗಳು ಜೀವನ ಸಂಗ್ರಾಮಕ್ಕೆ ಸಮರ್ಥರಾಗುವಂತೆ ರೂಪಿಸುವ ಉದ್ದೇಶದೊಂದಿಗೆ ಈ ಪ್ರವೇಶ ಪ್ರಕ್ರಿಯೆ ಕೈಗೊಳ್ಳಲಾಗಿದೆ ಎಂದು ರಾಮಕೃಷ್ಣ ಮಿಷನ್ ಬಾಲಕಾಶ್ರಮದ ಕಾರ್ಯದರ್ಶಿ ಸ್ವಾಮಿ ಜಿತಕಾಮಾನಂದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
