ಉಡುಪಿ : ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಉಡುಪಿ ವತಿಯಿಂದ 2025-26ನೇ ಸಾಲಿನ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. 90 ಮತ್ತು ಅದಕ್ಕಿಂತ ಹೆಚ್ಚು, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 85 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಹಾಗೆಯೇ 2024-25ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ. 75 ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ. 70 ಮತ್ತು ಮೇಲ್ಪಟ್ಟು ಅಂಕಗಳನ್ನು ಪಡೆದ ವಿದ್ಯಾರ್ಥಿಗಳೂ ಅರ್ಜಿ ಸಲ್ಲಿಸಬಹುದು.
ಇದಲ್ಲದೆ, ಬ್ಯಾಂಕಿನ ಸದಸ್ಯರ ಮಕ್ಕಳಿಗೆ ವಿಶೇಷ ಅರ್ಹತಾ ಮಾನದಂಡ ನಿಗದಿಪಡಿಸಲಾಗಿದ್ದು, ಎಸ್.ಎಸ್.ಎಲ್.ಸಿ.ಯಲ್ಲಿ ಶೇ. 95, ದ್ವಿತೀಯ ಪಿಯುಸಿಯಲ್ಲಿ ಶೇ. 90, ಅಂತಿಮ ಪದವಿಯಲ್ಲಿ ಶೇ. 80 ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಶೇ. 75 ಮತ್ತು ಮೇಲ್ಪಟ್ಟು ಅಂಕ ಗಳಿಸಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಅರ್ಜಿ ಸಲ್ಲಿಸಲು ಜುಲೈ 31, 2026 ಕೊನೆಯ ದಿನವಾಗಿದೆ. ಪ್ರತಿಭಾ ಪುರಸ್ಕಾರದ ಅರ್ಜಿ ನಮೂನೆಗಳು ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕಿನ ಎಲ್ಲಾ ಶಾಖೆಗಳಲ್ಲಿ ಹಾಗೂ ಬ್ಯಾಂಕಿನ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿವೆ.
ಹೆಚ್ಚಿನ ಮಾಹಿತಿಗಾಗಿ 76192 07778 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಬ್ಯಾಂಕ್ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವ ಈ ಯೋಜನೆಯ ಪ್ರಯೋಜನವನ್ನು ಅರ್ಹ ವಿದ್ಯಾರ್ಥಿಗಳು ಪಡೆದುಕೊಳ್ಳುವಂತೆ ಬ್ಯಾಂಕ್ ಮನವಿ ಮಾಡಿದೆ.
ಪ್ರತಿಭಾ ಪುರಸ್ಕಾರದ ಅರ್ಜಿಗಳು ಮಹಾಲಕ್ಷ್ಮೀ ಕೋ-ಓಪರೇಟಿವ್ ಬ್ಯಾಂಕಿನ ಎಲ್ಲಾ ಶಾಖೆ ಹಾಗೂ ಬ್ಯಾಂಕಿನ ಅಧಿಕೃತ ವೆಬ್‌ಸೈಟ್ www.mahalakshmicoopbank.com ನಲ್ಲಿ ಲಭ್ಯವಿದೆ.

