
ಮಂಗಳೂರು: ಬೀಡಿ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕಾರ್ಮಿಕ ಕಲ್ಯಾಣ ಸಂಸ್ಥೆಯು ವಿದ್ಯಾರ್ಥಿವೇತನ ಯೋಜನೆ ಜಾರಿಗೊಳಿಸಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
1ರಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಆಗಸ್ಟ್ 31ರೊಳಗೆ ಹಾಗೂ ಪ್ರಥಮ ಪಿಯುಸಿ ಮತ್ತು ಅದಕ್ಕಿಂತ ಮೇಲಿನ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅಕ್ಟೋಬರ್ 31ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಥಿವೇತನದ ವಿವರ
* 1ರಿಂದ 4ನೇ ತರಗತಿ – ₹1,000
* 5ರಿಂದ 8ನೇ ತರಗತಿ – ₹1,500
* 9 ಮತ್ತು 10ನೇ ತರಗತಿ – ₹2,000
* ಪ್ರಥಮ ಮತ್ತು ದ್ವಿತೀಯ ಪಿಯುಸಿ – ₹3,000
* ಡಿಪ್ಲೋಮಾ, ಐಟಿಐ, ಪಾಲಿಟೆಕ್ನಿಕ್ ಹಾಗೂ ಪದವಿ ಕೋರ್ಸ್ – ₹6,000
* ವೃತ್ತಿಪರ ಪದವಿ ಕೋರ್ಸ್ ವಿದ್ಯಾರ್ಥಿಗಳು – ₹25,000
ಅರ್ಜಿ ಸಲ್ಲಿಸುವ ವಿಧಾನ
ಅರ್ಹ ವಿದ್ಯಾರ್ಥಿಗಳು ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್ scholarships.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.
ವೆಬ್‌ಸೈಟ್‌ನಲ್ಲಿ Students ವಿಭಾಗದ ಅಡಿಯಲ್ಲಿ OTR Registration ಆಯ್ಕೆ ಮಾಡಿ, ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ನೋಂದಣಿ ಪೂರ್ಣಗೊಳಿಸಬೇಕು. ಇ-ಕೆವೈಸಿ ಪ್ರಕ್ರಿಯೆ ಮುಗಿದ ಬಳಿಕ ಮೊಬೈಲ್ ಸಂಖ್ಯೆಗೆ ಉಲ್ಲೇಖ ಸಂಖ್ಯೆ (Reference Number) ಲಭ್ಯವಾಗುತ್ತದೆ.
