ಉಜಿರೆ: ಕೊಡಗು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಆಯ್ಕೆಯಾದ ಶ್ರೀಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್ ನಾರ್ಧನರವರಿಗೆ ”ವಿಶೇಷ ಅಭಿನಂದನಾ ಕಾರ್ಯಕ್ರಮ”ದಿನಾಂಕ: 14/03/2024ರಂದು ಸಿರಿ ಕೇಂದ್ರ ಕಛೇರಿಯಲ್ಲಿ ಜರುಗಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಖ್ಯಾತ ಚಲನಚಿತ್ರನಟ ಹಾಗೂ ಸಿರಿ ಬ್ರ್ಯಾಂಡ್ ರಾಯಭಾರಿಯೂ ಆಗಿರುವ ರಮೇಶ್ ಅರವಿಂದ ರವೆರು ಸಿರಿ ಎಂಡಿ ಜನಾರ್ಧನರವರನ್ನು ಪ್ರೀತಿ ಪೂರ್ವಕವಾಗಿ ಅಭಿನಂದಿಸಿ, ಗೌರವಾರ್ಪಣೆ ಸಲ್ಲಿಸಿದರು. ನಂತರ ಅವರು ಮಾತನಾಡಿ ಪೂಜ್ಯರ ಆದರ್ಶ ತತ್ವವನ್ನು ಮೈಗೂಡಿಸಿಕೊಂಡಿರುವಂತಹ ಶ್ರೀಯುತ ಜನಾರ್ಧನರವರು ಸದಾ ಕ್ರಿಯಾಶೀಲರಾಗಿದ್ದು, ಯಾವುದೇ ವ್ಯಕ್ತಿ ಇವರಲ್ಲಿ ತಮ್ಮ ಅಸಹಾಯಕತೆಯನ್ನು ಹೇಳಿಕೊಂಡಂತಹ ಸಂದರ್ಭದಲ್ಲಿ ಕಿಂಚಿತ್ತೂ ಹಿಂಜರಿಯದೇ ತಮ್ಮ ಸಹಾಯ ಹಸ್ತವನ್ನು ಚಾಚುವ ಮೂಲಕ ಔದಾರ್ಯವನ್ನು ಮೆರೆದಿದ್ದಾರೆ. ಇಂತಹ ಸಜ್ಜನಿಕೆ, ಸಹೃದಯವನ್ನು ಹೊಂದಿರುವ ವ್ಯಕ್ತಿ ಸಿರಿ ಸಂಸ್ಥೆಯ ಎಂಡಿಯಾಗಿರುವುದು ನಮ್ಮೆಲ್ಲರ ಸೌಭಾಗ್ಯ.
ಸದಾಸಿರಿಸಂಸ್ಥೆಯಉನ್ನತಿಗಾಗಿಹಗಳಿರುಳುಶ್ರಮಿಸುತ್ತಾ, ತಮ್ಮಜೀವನವನ್ನೇಮುಡಿಪಾಗಿಟ್ಟಿರುವಂತಹಸಿರಿಎಂಡಿಯವರೊಂದಿಗೆನಾವು,ನೀವೇಲ್ಲರೂಕೈಜೋಡಿಸಿರಾಜ್ಯದಾದ್ಯಂತಪ್ರಸಿದ್ಧಿಗಳಿಸಿರುವನಮ್ಮಸಿರಿಬ್ರ್ಯಾಂಡನ್ನುಇಡೀಭಾರತದೇಶದಾದ್ಯಂತಸೂಪರ್ಬ್ರ್ಯಾಂಡ್ಆಗಿಎತ್ತಿಹಿಡಿಯುವಲ್ಲಿನಾವೆಲ್ಲರೂಶಕ್ತಿಮೀರಿಪ್ರಯತ್ನಿಸೋಣಎಂದುಎಲ್ಲಾಸಿರಿಸಿಬ್ಬಂದಿಗಳಿಗೆಶುಭಹಾರೈಸಿದರು
ಕೊಡಗು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದ ಫ್ರೊ| ಅಶೋಕ್ ಆಲೂರು ಮತ್ತು ಡಾಕ್ಟರೇಟ್ ಪದವಿ ಪುರಸ್ಕೃತರಾದ ಡಾ|ರೂಪಾ ಅಶೋಕ್ ಆಲೂರು ದಂಪತಿಗಳು ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಉಪಸ್ಥಿತರಿದ್ದು, ಸಿರಿ ಎಂಡಿ ಕೆ.ಎನ್ ಜನಾರ್ಧನರವರ ಪ್ರಾಮಾಣಿಕತೆ, ಕರ್ತವ್ಯ ನಿಷ್ಠೆ ಮತ್ತು ಅವರು ತಮ್ಮ ವೃತ್ತಿ ಜೀವನದಲ್ಲಿ ಸಾಧಿಸಿರುವಂತಹ ಅನೇಕ ಸಾಧನೆಗಳು ಹಾಗೂ ಪೂಜ್ಯರ ಮಾರ್ಗದರ್ಶನದಲ್ಲಿಅವರು ನಿರ್ವಹಿಸಿರುವಂತಹ ಸಮಾಜಮುಖಿ ಕೆಲಸ ಕಾರ್ಯಗಳ ಬಗ್ಗೆ ಪ್ರಸಂಶೆ ವ್ಯಕ್ತಪಡಿಸಿ, ಕೊಡಗು ವಿವಿ ಸೆನೆಟ್ ಸದಸ್ಯರಾಗಿ ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಇವರಿಂದ ಇನ್ನಷ್ಟು ಜನಪರ ಕಾರ್ಯಗಳು ನೆರವೇರುವಂತಾಗಲಿ ಎಂದು ಹಾರೈಸಿ, ಗೌರವಾರ್ಪಣೆ ಸಲ್ಲಿಸಿದರು.
ಸಿರಿ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕರಾದ ರಾಜೇಶ್ ಪೈ, ಶ್ರೀ ಧ.ಮಂ.ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಜನಾರ್ಧನ ಮೋಗರಾಜ್ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಸಿರಿ ಎಂ.ಡಿಯವರಿಗೆ ಅಭಿನಂದನೆ ಸಲ್ಲಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್ . ಜನಾರ್ಧನರವರು ಮುಖ್ಯ ಅತಿಥಿ ಗಣ್ಯರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿ, ಬಾಲ್ಯದಿಂದ ಬಡತನದಲ್ಲಿಯೇ ತಾನು ಬೆಳೆದು ಬಂದ ದಿನಗಳನ್ನು ನೆನಪಿಸಿಕೊಂಡು, ಪೂಜ್ಯರು ಮತ್ತು ಮಾತೃಶ್ರೀ ಅಮ್ಮನವರ ಆಶೀರ್ವಾದ ಹಾಗೂ ಅವರ ಮಾರ್ಗದರ್ಶನದಲ್ಲಿ ಸಿರಿ ಎಂಡಿಯಾಗಿ ಕಾರ್ಯನಿರ್ವಹಿಸುತ್ತಿರುವ ಜೊತೆಗೆ ವಿವಿಧ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿಯೂ ಸೇವೆಗೈಯ್ಯುವ ಸದಾವಕಾಶ ದೊರೆತಿರುವುದು ನನ್ನ ಸೌಭಾಗ್ಯ. ಸಿರಿ ಸಿಬ್ಬಂದಿಗಳೆಲ್ಲರೂ ಪ್ರಾಮಾಣಿಕತೆಯಿಂದ ಶ್ರಮ ವಹಿಸಿ ದುಡಿಯುವ ಮೂಲಕ ಸಂಸ್ಥೆಯು ಯಶಸ್ವಿಯಾಗಿ ನಡೆದು ಪೂಜ್ಯರ ಕನಸಾಗಿರುವ ಸಿರಿ ಸಂಸ್ಥೆಯನ್ನು ರಾಷ್ಟ್ರ ಮಟ್ಟದಲ್ಲಿ ಎತ್ತಿಹಿಡಿಯುವಲ್ಲಿ ಸಂಪೂರ್ಣ ಸಹಕಾರ ನೀಡುವಂತೆ ಕೋರಿದರು.
ಈ ಸಂದರ್ಭದಲ್ಲಿ ರಮೇಶ್ ಅರವಿಂದ್, ಕೊಡಗು ವಿವಿ ಉಪಕುಲಪತಿ ಅಶೋಕ್ ಆಲೂರು ಮತ್ತು ಡಾ| ರೂಪಾ ಅಶೋಕ್ ಆಲೂರು ದಂಪತಿಯನ್ನು ಸಿರಿ ಸಂಸ್ಥೆಯ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು. ಸಿರಿಸಂಸ್ಥೆಯ ಆಡಳಿತ ನಿರ್ದೇಶಕರಾದ ಪ್ರಸನ್ನರವರು ಸ್ವಾಗತಿಸಿ, ಗೋದಾಮು ಪ್ರಬಂಧಕ ಜೀವನ್ ಕುಮಾರ್ ಕಾರ್ಯಕ್ರಮ ರೂಪಿಸಿ, ಮುಖ್ಯ ಸಲಹೆ ಅಧಿಕಾರಿ ಗಣೇಶ್ ಪ್ರಸಾದ್ ಎಸ್ ಕಾಮತ್ ರವರು ಧನ್ಯವಾದವಿತ್ತರು.