ಕೋಟೇಶ್ವರ-ಹೆಜಮಾಡಿ ನಡುವೆ ಸರ್ವಿಸ್ ರಸ್ತೆಯ ನಿರ್ಮಾಣಕ್ಕೆ ಅನುಮೋದನೆ

0
188

ಉಡುಪಿ: ರಾಷ್ಟ್ರೀಯ ಹೆದ್ದಾರಿ 99ರಲ್ಲಿ ಸಂಭವಿಸುತ್ತಿರುವ ಮಾರಕ ಅಪಘಾತಗಳನ್ನು ತಪ್ಪಿಸಿಕೊಳ್ಳಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೋಟೇಶ್ವರ ಮತ್ತು ಹೆಜಮಾಡಿ ನಡುವೆ ೨೯ ಕಿಲೋಮೀಟರ್ ಸರ್ವಿಸ್ ರಸ್ತೆಯ ನಿರ್ಮಾಣಕ್ಕೆ ಅನುಮೋದನೆ ನೀಡಿದೆ ಮತ್ತು ಆರು ಪಾದಚಾರಿ ಮೇಲ್ಸೇತುವೆಗಳನ್ನು ನಿರ್ಮಿಸಲಾಗುವುದು ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಪತ್ರಿಕಾ ಪ್ರಕಟಣೆಯಲ್ಲಿ ಘೋಷಿಸಿದ್ದಾರೆ.

ಬ್ರಹ್ಮಾವರದಲ್ಲಿ ಶಾಲೆಯ ಬಳಿ ವೇಗವಾಗಿ ಚಲಿಸುವ ವಾಹನಕ್ಕೆ ಶಾಲಾ ಬಾಲಕನೊಬ್ಬ ಸಾವನ್ನಪ್ಪಿದ ದುರಂತ ಘಟನೆಯ ನಂತರ ರಸ್ತೆ ಸುರಕ್ಷತಾ ಮೂಲಸೌಕರ‍್ಯವನ್ನು ಹೆಚ್ಚಿಸುವ ಬೇಡಿಕೆ ಹೆಚ್ಚಾಯಿತು. ವ್ಯಾಪಕ ಪ್ರತಿಭಟನೆಗಳು ನಡೆದವು, ಅಪಘಾತ ಪೀಡಿತ ಪ್ರದೇಶಗಳಲ್ಲಿ ರಸ್ತೆ ಸೌಲಭ್ಯಗಳನ್ನು ಸುಧಾರಿಸಲು ಪದೇ ಪದೇ ಮನವಿಗಳು ಬಂದವು. ಈ ಎಲ್ಲಾ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವನ್ನು ಸಂಪರ್ಕಿಸಿ ಸರ್ವಿಸ್‌ ರಸ್ತೆ ನಿರ್ಮಾಣಕ್ಕೆಅನುಮೋದನೆ ತಂದಿದ್ದಾರೆ.

LEAVE A REPLY

Please enter your comment!
Please enter your name here