‘ಕಾಂತಾರ’ ಚಿತ್ರದ ಕಂಬಳ ದೃಶ್ಯದಲ್ಲಿ ಮಿಂಚಿದ್ದ ಅಪ್ಪು ಕೋಣ ಸಾವು

0
153

‘ಕಾಂತಾರ’ ಸಿನಿಮಾ 2022ರಲ್ಲಿ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈ ಚಿತ್ರದ ಮೂಲಕ ಅನೇಕ ಕಲಾವಿದರು ಜನಪ್ರಿಯತೆ ಪಡೆದರು. ಈ ಸಿನಿಮಾದಲ್ಲಿ ಕರಾವಳಿಯ ಸಂಪ್ರದಾಯದ ಬಗ್ಗೆ ಹೇಳಲಾಗಿತ್ತು. ದಕ್ಷಿಣ ಕನ್ನಡದ ಜನತೆಯ ಉಸಿರಿನ ಜೊತೆ ಬೆರೆತು ಹೋದ ಕಂಬಳದ ದೃಶ್ಯಗಳೂ ಇದ್ದವು. ಈ ದೃಶ್ಯದಲ್ಲಿ ಕಾಣಿಸಿಕೊಂಡಿದ್ದ ಅಪ್ಪು ಕೋಣ ಸಾವನ್ನಪ್ಪಿದೆ. ಅಪ್ಪು ಕೋಣದ ಮಾಲೀಕರು ಹಾಗೂ ಕಂಬಳ ಪ್ರಿಯರಿಗೆ ಈ ವಿಚಾರ ಬೇಸರ ಮೂಡಿಸಿದೆ.

‘ಕಾಂತಾರ’ ಚಿತ್ರದಲ್ಲಿ ರಿಷಬ್ ಶೆಟ್ಟಿ ಹೀರೋ ಆಗಿ ಮಿಂಚಿದ್ದರು. ಈ ಚಿತ್ರದ ನಿರ್ದೇಶನ ಕೂಡ ಅವರದ್ದೇ. ಅವರು ಈ ಸಿನಿಮಾಗಾಗಿ ಕಷ್ಟಪಟ್ಟು ಕಂಬಳ ಓಡಿಸೋದನ್ನು ಕಲಿತಿದ್ದರು. ಇದಕ್ಕಾಗಿ ಬೈಂದೂರು ಬೊಳಂಬಳ್ಳಿಯ ಕಂಬಳ ಪ್ರೇಮಿ ಪರಮೇಶ್ವರ ಭಟ್ ಅವರು ಸಾಕಿದ್ದ ಕೋಣ ಬಳಕೆ ಆಗಿತ್ತು. ಈ ಕೋಣಗಳಿಗೆ ಅಪ್ಪು ಹಾಗೂ ಕಾಲಾ ಎಂದು ಹೆಸರು ಇಡಲಾಗಿತ್ತು. ಈ ಪೈಕಿ ಅಪ್ಪು ಕೋಣ ನಿಧನ ಹೊಂದಿದೆ.

ಚಿತ್ರೀಕರಣಕ್ಕೂ ಮೊದಲಿನಿಂದಲೇ ಅಪ್ಪು ಮತ್ತು ಕಾಲಾ ಕೋಣಗಳ ಮೂಲಕ ರಿಷಬ್ ತಬೇತಿ ಪಡೆದಿದ್ದರು. ಇವುಗಳ ಜೊತೆ ರಿಷಬ್​ಗೆ ಆಪ್ತತೆ ಬೆಳೆದಿತ್ತು. ಆ ಬಳಿಕ ಸಿನಿಮಾಗಳಲ್ಲೂ ಕೋಣಗಳು ಕಾಣಿಸಿಕೊಂಡಿದ್ದವು. ಈ ಪೈಕಿ ಒಂದು ಕೋಣ ನಿಧನ ಹೊಂದಿದ್ದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಪ್ರಶಸ್ತಿಗಳ ಸರಮಾಲೆ..

ಸಿನಿಮಾಗಳಲ್ಲಿ ಮಾತ್ರ ಅಪ್ಪು ಹಾಗೂ ಕಾಲಾ ಕೋಣಗಳು ಚಾಂಪಿಯನ್ ಅಲ್ಲ, ನಿಜ ಜೀವನದಲ್ಲೂ ಇವು ಸಾಕಷ್ಟು ಅವಾರ್ಡ್ ಗೆದ್ದಿವೆ. ನೇಗಿಲು ಜೂನಿಯರ್ ವಿಭಾಗದಲ್ಲಿ ಎರಡು ಬಾರಿ ಸರಣಿಶ್ರೇಷ್ಠ ಪ್ರಶಸ್ತಿ ಪಡೆದಿದ್ದವು. ಕುಂದಾಪುರ ಭಾಗದಲ್ಲಿ ನಡೆಯುವ ಕಂಬಳದಲ್ಲಿ 5 ವರ್ಷ ಈ ಕೋಣಗಳು ಚಾಂಪಿಯನ್ ಆಗಿದ್ದವು. ಬೆಂಗಳೂರು ಕಂಬಳದಲ್ಲೂ ಕನೆಹಲಗೆ ವಿಭಾಗದಲ್ಲಿ ಪ್ರಥಮ ಪ್ರಶಸ್ತಿ ಪಡೆದಿದ್ದವು. ಕರಾವಳಿಯ ಬಹುತೇಕ ಕಂಬಳಗಳಲ್ಲಿ ಕೀರ್ತಿ-ಬಹುಮಾನ ಸಂಪಾದಿಸಿದ್ದ ಅಪ್ಪು ಕೋಣ ಈಗ ಅಗಲಿದೆ.

‘ಕಾಂತಾರ: ಚಾಪ್ಟರ್ 1’

‘ಕಾಂತಾರ’ ಯಶಸ್ಸಿನ ಬಳಿಕ ರಿಷಬ್ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.  ಈ ಸಿನಿಮಾದಲ್ಲಿಯೂ ಕಂಬಳದ ದೃಶ್ಯಗಳು ಇರುವುದು ಅನುಮಾನ ಎನ್ನಲಾಗುತ್ತಿದೆ. ಇದಕ್ಕಾಗಿ ರಿಷಬ್ 3 ವರ್ಷ ಶ್ರಮ ಹಾಕಿದ್ದಾರೆ.

LEAVE A REPLY

Please enter your comment!
Please enter your name here