ಎಪ್ರಿಲ್ 19 : ಯುವವಾಹಿನಿ ಡೆನ್ನಾನ ಡೆನ್ನನ ಸಾಂಸ್ಕೃತಿಕ ಹಬ್ಬ

0
16

ಬಂಟ್ವಾಳ : ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ 2026, ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರದಲ್ಲಿ ಎಪ್ರಿಲ್ 19 ಆದಿತ್ಯವಾರ ಬೆಳಗ್ಗೆ 08.30 ರಿಂದ ಸಂಜೆ 06.30 ರ ವರೆಗೆ ನಡೆಯಲಿದೆ.

1500 ಕ್ಕೂ ಅಧಿಕ ಕಲಾವಿದರು, ಬೆಂಗಳೂರು, ಉಡುಪಿ ಸೇರಿದಂತೆ ಯುವವಾಹಿನಿ ಸಂಸ್ಥೆಯ 35 ಘಟಕಗಳು ಈ ಸಾಂಸ್ಕೃತಿಕ ಹಬ್ಬದಲ್ಲಿ ಭಾಗವಹಿಸಲಿದ್ದಾರೆ.

ಸಂಜೆ 4 ಗಂಟೆಗೆ ಯುವವಾಹಿನಿ ಕೇಂದ್ರ ಸಮಿತಿಯನ್ನು ಮುನ್ನಡೆಸಿದ 35 ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ ಹಾಗೂ, ದ್ವಿತೀಯ ಪಿಯುಸಿ ರಾಜ್ಯದ ಟಾಪರ್ ದಿಶಾ ಇವರಿಗೆ ಅಭಿನಂದನಾ ಸಮಾರಂಭ ನಡೆಯಲಿದೆ

ಉದ್ಘಾಟನಾ ಸಮಾರಂಭ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಸಮಾರಂಭ ಉದ್ಘಾಟಿಸಲಿದ್ದಾರೆ. ಯುವವಾಹಿನಿ (ರಿ.) ಬಂಟ್ವಾಳ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಪಡುಮಲೆ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ್‌ ಸ್ಪರ್ಧೆಗೆ ಚಾಲನೆ ನೀಡಲಿದ್ದಾರೆ. ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬೇಬಿ ಕುಂದರ್, ಅನ್‌ರೋಕ್ ಪ್ರೈ ಲಿ., ಮುಂಬೈ ಆಡಳಿತ ನಿರ್ದೇಶಕರಾದ ಸಂತೋಷ್ ಜೆ.ಪೂಜಾರಿ ಕಾರ್ಕಳ ತಾಲೂಕು, ಸಮಗ್ರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಲತಾ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಉಪಾಧ್ಯಕ್ಷ ಜಯಪ್ರಕಾಶ್ ಜೆ. ಎಸ್‌. ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ ರಾಗಿಣಿ ಮಾಧವ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಸಭಾ ಕಾರ್ಯಕ್ರಮ : ಮಧ್ಯಾಹ್ನ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಡು ವಹಿಸಲಿದ್ದಾರೆ, ಯುವವಾಹಿನಿ ಬಂಟ್ವಾಳ ಘಟಕದ ರಜತವರ್ಷದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಪ್ರಸ್ತಾವನೆ ಮಾಡಲಿದ್ದಾರೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರು ಕ್ಯಾಪ್ಟನ್ ಬ್ರಿಜೇಶ್ ಚೌಟ, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರು ರಾಜೇಶ್ ನ್ಯಾಕ್ ಉಳಿಪ್ಪಾಡಿ, ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರು ಅಶೋಕ್ ಕುಮಾರ್ ರೈ, ಮಾಜಿ ಸಚಿವರು ಬಿ. ರಮಾನಾಥ ರೈ, ಅಸ್ತ್ರ ಗ್ರೂಪ್ ಆಫ್ ಕಂಪೆನೀಸ್ ಮ್ಹಾಲಕರು ಲಾಂಚುಲಾಲ್ ಕೆ. ಎಸ್. ಉದ್ಯಮಿ ಪ್ರಿಯದರ್ಶಿನಿ ಸುನೀಲ್‌ ಬಜ್ಜೆ, ಉದ್ಯಮಿ, ಮನೋಜ್ ಶರ್ಮ, ಉದ್ಯಮಿ ಗೋಪಾಲ ಮೂಲ್ಯ, ಅಗ್ರಜ ಬಿಲ್ಡರ್ಸ್ ಮಾಲಕರು ಸಂದೇಶ್ ಶೆಟ್ಟಿ,, ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಸಂಸ್ಥಾಪಕರು ಅರ್ಜುನ್ ಭಂಡಾರ್ಕರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಸಮಾರೋಪ ಸಮಾರಂಭ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ, ಅಶೋಕ್ ಕುಮಾರ್ ಪಡ್ಡು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಲ್ಕಿ-ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಉಮಾನಾಥ ಕೋಟ್ಯಾನ್, ಅಖಿಲ ಭಾರತ ಬಿಲ್ಲವರ ಮಹಾಮಂಡಲ (ರಿ.), ಮುಲ್ಕಿ ಇದರ ಅಧ್ಯಕ್ಷ, ,ಸೂರ್ಯಕಾಂತ್ ಜೆ.ಸುವರ್ಣ, ಕರ್ನಾಟಕ ಸರ್ಕಾರದ ಹೆಚ್ಚುವರಿ ಅಡ್ವಕೇಟ್ ಜನರಲ್ ತಾರನಾಥ ಪೂಜಾರಿ, ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ, ಪದ್ಮರಾಜ್ ಆರ್. ಪೂಜಾರಿ , ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಟ್ರಸ್ಟಿ ಜಗದೀಪ್ ಡಿ. ಸುವರ್ಣ, ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ಉದ್ಯಮಿ ಪ್ರಕಾಶ್ ಕುಂಪಲ, ಉದ್ಯಮಿ ಸುದರ್ಶನ್ ಬಜ, ಕಟ್ಟೆಮಾರ್ ಶ್ರೀ ಮಂತ್ರದೇವತಾ ಕ್ಷೇತ್ರದ ಧರ್ಮದರ್ಶಿ ಮನೋಜ್ ಕುಮಾ‌ರ್ ಕಟ್ಟೆಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಎಂದು ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ‌ ಕಾರ್ಯದರ್ಶಿ ರೇಖಾ ಗೋಪಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು, ಸಾಂಸ್ಕೃತಿಕ ನಿರ್ದೇಶಕ ದಿನೇಶ್ ಸುವರ್ಣ ರಾಯಿ, ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು, ಕಾರ್ಯದರ್ಶಿ ಮಧುಸೂದನ್ ಮದ್ವ, ಸಾಂಸ್ಕೃತಿಕ ನಿರ್ದೇಶಕ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ, ಕಾರ್ಯಕ್ರಮದ ಪ್ರಧಾನ ಸಂಚಾಲಕ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಸಂಚಾಲಕರಾದ ಗೀತಾ ಜಗದೀಶ್, ಉದಯ ಪೂಜಾರಿ ಮೇನಾಡು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here