ಏ.20: ಧರ್ಮಸ್ಥಳದಲ್ಲಿ ನೂತನ ಕಲ್ಯಾಣ ಮಂಟಪಗಳ ಸಮುಚ್ಚಯ ಉದ್ಘಾಟನೆ

0
92

ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಶ್ರೀ ಉಮಾಮಹೇಶ್ವರ, ಶ್ರೀ ಶಿವಪಾರ್ವತಿ ಮತ್ತು ಶ್ರೀ ಗೌರೀಶಂಕರ ಎಂಬ ಮೂರು ನೂತನ ಕಲ್ಯಾಣಮಂಟಪಗಳ ಸಮುಚ್ಚಯವನ್ನು ನಿರ್ಮಿಸಿದ್ದು, ಇದೇ ೨೦ ರಂದು ಭಾನುವಾರ ಅಪರಾಹ್ನ ನಾಲ್ಕು ಗಂಟೆಗೆ ರಾಜ್ಯದ ಮಾನ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸುವರು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು.
ಹೇಮಾವತಿ ವೀ. ಹೆಗ್ಗಡೆಯವರು ಮತ್ತು ಡಿ. ಸುರೇಂದ್ರ ಕುಮಾರ್ ಶುಭಾಶಂಸನೆ ಮಾಡುವರು.
ಶಾಸಕರುಗಳಾದ ಕೆ. ಹರೀಶ್ ಪೂಂಜ, ಮತ್ತು ಕೆ. ಪ್ರತಾಪಸಿಂಹ ನಾಯಕ್, ಹಾಗೂ ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ರಕ್ಷಿತ್‌ಶಿವರಾಂ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಅಮೃತವರ್ಷಿಣಿ ಸಭಾಭವನದಲ್ಲಿ ಸಭಾಕಾರ್ಯಕ್ರಮ ನಡೆಯಲಿದೆ.

LEAVE A REPLY

Please enter your comment!
Please enter your name here