ಮೂಡುಬಿದಿರೆ: ಸುವರ್ಣ ಕರ್ನಾಟಕ ರಾಜ್ಯ ಸಮಿತಿ ಜೈ ಭೀಮ್ ಸೇನೆ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಮೂಡುಬಿದಿರೆ ಆಡಳಿತ ಸೌಧ ಮುಂಭಾಗದಲ್ಲಿ ಎ.20 ರಂದು ಅಂಬೇಡ್ಕರ್ ಜಯಂತಿಯ ಆಚರಣಿ ನಡೆಯಲಿದೆ ಎಂದು ಸೇನೆಯ ರಾಜ್ಯಾಧ್ಯಕ್ಷ ವತೂ೯ರು ಮಂಜುನಾಥ್ ತಿಳಿಸಿದ್ದಾರೆ.
ಅವರು ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಸಾಮಾನ್ಯ ಜನರಿಗೂ ಸಮಾನವಾದ ನ್ಯಾಯ ಸಿಗಬೇಕು. ಹಾಗೂ ಸಮುದಾಯದ ಜನರು ಆಥಿ೯ಕವಾಗಿ ಸಬಲರಾಗಬೇಕು ಎನ್ನುವ ಉದ್ದೇಶದಿಂದ ಕಾಯ೯ಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಬೈಕ್ ರ್ಯಾಲಿ, ಹಾಗು ಭವ್ಯ ಮೆರವಣಿಗೆ ನಡೆಯಲಿದ್ದು ಸುಮಾರು ಒಂದು ಸಾವಿರ ಜನ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಶಾಸಕ ಉಮಾನಾಥ ಎ.ಕೋಟ್ಯಾನ್ ಸಭೆಯಲ್ಲಿ ಅಧ್ಯಕ್ಷತೆ ವಹಿಸಲಿದ್ದು, ಬಿಗ್ ಬಾಸ್ ಖ್ಯಾತಿಯ ವತೂ೯ರ್ ಸಂತೋಷ್ , ಚಿತ್ರ ನಟ ಸಂದೇಶ್, ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿ ನವೀನ್ ಚಿಂಗ, ಮೂಡುಬಿದಿರೆ ತಾಲೂಕು ಘಟಕದ ಅಧ್ಯಕ್ಷ ಪ್ರವೀಣ್ ಎಸ್., ಉಪಾಧ್ಯಕ್ಷ ರಂಜಿತ್ ಕುಮಾರ್, ಸುಧೀರ್, ಪ್ರಧಾನ ಕಾರ್ಯದರ್ಶಿ ಚೇತನ್ ಕುಮಾರ್ ಭಾಗವಹಿಸಿದ್ದರು.
ಏ.20 : ಮೂಡುಬಿದಿರೆಯಲ್ಲಿ ಜೈ ಭೀಮ್ ಸೇನೆಯಿಂದ ಅಂಬೇಡ್ಕರ್ ಜಯಂತಿ ಆಚರಣೆ: ವರ್ತೂರು ಮಂಜುನಾಥ್
RELATED ARTICLES